Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:1 - ಕನ್ನಡ ಸತ್ಯವೇದವು C.L. Bible (BSI)

1 ಆಮೇಲೆ ಆ ಪುರುಷ ನನ್ನನ್ನು ಪರಿಶುದ್ಧಸ್ಥಳಕ್ಕೆ ತಂದು ಅದನ್ನು ಅಳೆಯಲು ಅದರ ಎದುರುಬದುರಿನ ನಿಲವುಕಂಬಗಳ ಅಗಲ ದೇವರ ಗುಡಾರದ ಅಗಲದಂತೆ ಮೂರು ಮೂರು ಮೀಟರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಮೇಲೆ ಅವನು ನನ್ನನ್ನು ದೇವಾಲಯದ ಪರಿಶುದ್ಧ ಸ್ಥಳಕ್ಕೆ ಕರೆದುಕೊಂಡು ಬಂದು, ಅದರ ದ್ವಾರಕಂಬಗಳನ್ನು ಅಳತೆ ಮಾಡಲು, ಅದರ ಎರಡು ಕಡೆಗಳು ಆರು ಮೊಳ ಅಗಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಅವನು ನನ್ನನ್ನು ಪರಿಶುದ್ಧಸ್ಥಳಕ್ಕೆ ತಂದು ಅದನ್ನು ಅಳೆಯಲು ಅದರ ಎದುರುಬದುರಿನ ನಿಲವುಕಂಬಗಳ ಅಗಲ ದೇವರ ಗುಡಾರದ ಅಗಲದಂತೆ ಆರಾರು ಮೊಳ, ದ್ವಾರದ ಅಗಲ ಹತ್ತು ಮೊಳ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಮೇಲೆ ಅವನು ನನ್ನನ್ನು ಪವಿತ್ರಸ್ಥಳಕ್ಕೆ ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿರುವ ಗೋಡೆಯನ್ನು ಅವನು ಅಳತೆ ಮಾಡಿದನು. ಆ ಗೋಡೆಗಳು ಆರು ಮೊಳ ದಪ್ಪವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಮೇಲೆ, ಆ ಮನುಷ್ಯನು ನನ್ನನ್ನು ದೇವಾಲಯಕ್ಕೆ ಕರೆತಂದು ಕಂಬಗಳನ್ನು ಎರಡೂ ಕಡೆಯಲ್ಲಿ ಸುಮಾರು 3.2 ಮೀಟರ್ ಎಂದು ಅಳೆದನು. ಇದೇ ಆ ಗುಡಾರದ ಉದ್ದಗಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:1
16 ತಿಳಿವುಗಳ ಹೋಲಿಕೆ  

ಪರಿಶುದ್ಧ ಸ್ಥಳದ ಮತ್ತು ಮಹಾಪರಿಶುದ್ಧ ಸ್ಥಳದ ಬಾಗಿಲುಗಳಿಗೆ ಎರಡೆರಡು ಕದಗಳು,


ಅನಂತರ ಆ ಪುರುಷ ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರೆದುತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು. ಒಟ್ಟಾಗಿ ನೆಲೆಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.


ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಆ ನಗರವನ್ನೂ ಅದರ ಹೆಬ್ಬಾಗಿಲುಗಳನ್ನೂ ಕೋಟೆಗಳನ್ನೂ ಅಳತೆಮಾಡುವುದಕ್ಕಾಗಿ ಒಂದು ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಪರಿಶುದ್ಧಸ್ಥಳದ ಈಚಿನ ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು; ಮಹಾಪರಿಶುದ್ಧ ಸ್ಥಳದ ಈಚಿನ ಗೋಡೆಯ ಚೌಕಟ್ಟು ಹಾಗೆಯೇ ಇತ್ತು.


ಆಮೇಲೆ ಆ ಪುರುಷ ಇನ್ನೂ ಮುಂದಕ್ಕೆ ಹೋಗಿ ಪರಿಶುದ್ಧ ಸ್ಥಳದ ಕೊನೆಯಲ್ಲಿ ಗರ್ಭಗೃಹವನ್ನು ಅಳೆಯಲು ದ್ವಾರದ ಒಂದೊಂದು ನಿಲವುಕಂಬದ ಅಗಲ ಒಂದೊಂದು ಮೀಟರ್, ದ್ವಾರದ ಅಗಲ ಮೂರು ಮೀಟರ್.


ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು; ಅದು ನಾಲ್ಕು ಮೀಟರ್ ಇತ್ತು; ನಿಲವು ಕಂಬಗಳ ಅಗಲ ಒಂದೊಂದು ಮೀಟರ್. ಹೆಬ್ಬಾಗಿಲ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು.


ಅವನು ಸರ್ವೇಶ್ವರನಿಗೆ ಕಟ್ಟಿಸಿದ ದೇವಾಲಯದ ಉದ್ದ 27 ಮೀಟರ್, ಅಗಲ 9 ಮೀಟರ್, ಎತ್ತರ 13:5 ಮೀಟರ್.


ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಣ ಪ್ರಾಕಾರಕ್ಕೆ ಬರಮಾಡಿ ದೀಕ್ಷಿತರ ಪ್ರಾಕಾರಕ್ಕೂ ಉತ್ತರದ ಪೌಳಿಗೋಡೆಗಳಿಗೂ ನಡುವಣ ಕೋಣೆಗಳಿಗೆ ಕರೆದುತಂದು


ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟ ನಾನೂರ ಎಂಬತ್ತನೆಯ ವರ್ಷದಲ್ಲಿ ಅಂದರೆ, ಇಸ್ರಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಾದ ವೈಶಾಖ ಮಾಸದಲ್ಲಿ ಅರಸ ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು