Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:2 - ಕನ್ನಡ ಸತ್ಯವೇದವು C.L. Bible (BSI)

2 ದ್ವಾರದ ಅಗಲ ಐದು ಮೀಟರು ದ್ವಾರದ ಎರಡು ಪಕ್ಕದ ಗೋಡೆಗಳ ಅಗಲ ಎರಡುವರೆ ಎರಡುವರೆ ಮೀಟರ್, ಪರಿಶುದ್ಧ ಸ್ಥಳದ ಉದ್ದ ಇಪ್ಪತ್ತು ಮೀಟರ್, ಅಗಲ ಹತ್ತು ಮೀಟರ್ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದ್ವಾರದ ಅಗಲವು ಹತ್ತು ಮೊಳಗಳೂ, ದ್ವಾರದ ಎರಡು ಪಕ್ಕದ ಗೋಡೆಗಳ ಅಗಲವು ಐದೈದು ಮೊಳಗಳೂ ಆಗಿದ್ದವು. ಅವನು ಪರಿಶುದ್ಧ ಸ್ಥಳವನ್ನು ಅಳತೆಮಾಡಿದಾಗ ಅದರ ಉದ್ದ ನಲ್ವತ್ತು ಮೊಳಗಳೂ, ಅಗಲ ಇಪ್ಪತ್ತು ಮೊಳಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದ್ವಾರದ ಎರಡು ಪಕ್ಕದ ಗೋಡೆಗಳ ಅಗಲ ಐದೈದು ಮೊಳ, ಪರಿಶುದ್ಧ ಸ್ಥಳದ ಉದ್ದ ನಾಲ್ವತ್ತು ಮೊಳ, ಅಗಲ ಇಪ್ಪತ್ತು ಮೊಳ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅದರ ಬಾಗಿಲು ಹತ್ತು ಮೊಳ ಅಗಲವಾಗಿದ್ದು ಅದರ ಎರಡು ಬದಿಯೂ ಐದೈದು ಮೊಳವಿದ್ದವು. ಅವನು ಆ ಕೋಣೆಯ ಅಳತೆ ತೆಗೆದನು. ಅದು ನಲವತ್ತು ಮೊಳ ಉದ್ದ, ಇಪ್ಪತ್ತು ಮೊಳ ಅಗಲವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬಾಗಿಲಿನ ಅಗಲವು ಸುಮಾರು ಐದು ಮೀಟರ್ ಮತ್ತು ಅದರ ಎರಡೂ ಬದಿಗಳಲ್ಲಿ ಗೋಡೆಗಳ ಅಗಲ ಸುಮಾರು ಎರಡೂವರೆ ಮೀಟರ್. ಅವನು ಮುಖ್ಯಸಭಾಂಗಣವನ್ನೂ ಅಳೆದನು. ಅದು ಸುಮಾರು ಇಪ್ಪತ್ತೊಂದು ಮೀಟರ್ ಉದ್ದ ಮತ್ತು ಸುಮಾರು ಹನ್ನೊಂದು ಮೀಟರ್ ಅಗಲವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:2
11 ತಿಳಿವುಗಳ ಹೋಲಿಕೆ  

ಅವನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದ ಇಪ್ಪತ್ತೇಳು ಮೀಟರ್ ಹಾಗೂ ಅಗಲ ಒಂಬತ್ತು ಮೀಟರ್.


ದೇವಾಲಯದ ಪರಿಶುದ್ಧ ಸ್ಥಳವೆನಿಸಿಕೊಳ್ಳುವ ಮುಂದಿನ ಭಾಗ 18 ಮೀಟರ್ ಉದ್ದವಿತ್ತು.


ಅವನು ಸರ್ವೇಶ್ವರನಿಗೆ ಕಟ್ಟಿಸಿದ ದೇವಾಲಯದ ಉದ್ದ 27 ಮೀಟರ್, ಅಗಲ 9 ಮೀಟರ್, ಎತ್ತರ 13:5 ಮೀಟರ್.


ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ.


ಆದುದರಿಂದ ಯೇಸು ಸ್ವಾಮಿ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಗಳಿಗೆ ನಾನೇ ಬಾಗಿಲು.


ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು; ಇಸ್ರಯೇಲ್‍ದೇವರ ಪವಿತ್ರಸ್ಥಾನದಲ್ಲಿ ಧೂಪಾರತಿ ಎತ್ತುವುದನ್ನೂ ದಹನಬಲಿ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.


ಹೀಗೆ ಆಲಯದಲ್ಲಿನ ತೊಲೆ, ಹೊಸ್ತಿಲು, ಗೋಡೆ, ಕದ ಇವುಗಳನ್ನು ಬಂಗಾರದ ತಗಡಿನಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.


ಡೇರೆಯ ಬಾಗಿಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ಪರದೆಯನ್ನು ಮಾಡಿದರು.


ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ, ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ತೆರೆಯನ್ನು ಮಾಡಿಸಬೇಕು.


ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದುತಂದನು; ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು