Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:24 - ಕನ್ನಡ ಸತ್ಯವೇದವು C.L. Bible (BSI)

24 ಒಂದೊಂದು ಕದಕ್ಕೆ ಎರಡೆರಡು ಮಡಚುವ ಭಾಗಗಳು; ಇತ್ತಕಡೆಯ ಕದಕ್ಕೆ ಎರಡು ಭಾಗ; ಅತ್ತಕಡೆಯ ಕದಕ್ಕೆ ಎರಡು ಭಾಗ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಒಂದೊಂದು ಬಾಗಿಲಿಗೆ ಎರಡೆರಡು ಮಡಚುವ ಭಾಗಗಳಿದ್ದವು. ಈ ಕಡೆಯ ಬಾಗಿಲಿಗೆ ಎರಡು ಭಾಗ, ಆ ಕಡೆಯ ಬಾಗಿಲಿಗೆ ಎರಡು ಭಾಗಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಒಂದೊಂದು ಕದಕ್ಕೆ ಎರಡೆರಡು ಮಡಚುವ ಭಾಗಗಳು; ಇತ್ತಕಡೆಯ ಕದಕ್ಕೆ ಎರಡು ಭಾಗ, ಅತ್ತಕಡೆಯ ಕದಕ್ಕೆ ಎರಡು ಭಾಗ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಒಂದೊಂದು ಬಾಗಿಲಿಗೆ ಎರಡೆರಡು ಚಿಕ್ಕ ಬಾಗಿಲುಗಳು ಅಂದರೆ ಎರಡೆರಡು ಮಡಚುವ ಬಾಗಿಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆ ಎರಡು ಬಾಗಿಲುಗಳಿಗೆ ಎರಡು ಕದಗಳಿದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಿಲಿಗೆ ಎರಡು, ಇನ್ನೊಂದು ಬಾಗಿಲಿಗೆ ಎರಡು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:24
5 ತಿಳಿವುಗಳ ಹೋಲಿಕೆ  

ಅದಕ್ಕೆ ತುರಾಯಿಮರದ ಎರಡು ಕದಗಳನ್ನು ಹಚ್ಚಿಸಿದನು. ಪ್ರತಿಯೊಂದು ಕದವು ಎರಡು ಭಾಗವುಳ್ಳದ್ದಾಗಿ ಮಡಚುವುದಕ್ಕೆ ಬರುತ್ತಿತ್ತು.


ಕೂಡಲೆ ಆ ಪುರುಷ ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆದುತಂದು ಅದನ್ನು ಅಳೆದನು. ಅದರ ಎದುರುಬದುರಿನ ನಿಲವುಕಂಬಗಳ ಅಗಲ ಎರಡುವರೆ ಮೀಟರುಗಳು, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಅರ್ಧರ್ಧ ಮೀಟರ್,


“ನೀವು ಒಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಲು ಅದಕ್ಕೆ ಬಹುದಿವಸ ಮುತ್ತಿಗೆ ಹಾಕಬೇಕಾಗಬಹುದು; ಅದಕ್ಕೆ ಸೇರಿದ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಶತ್ರುಗಳೇನು? ಅವುಗಳೊಡನೆ ಯುದ್ಧಮಾಡಬಹುದೇ?


ಇದಲ್ಲದೆ ಅವನು ಎಣ್ಣೇಮರದಿಂದ 4:4 ಮೀಟರ್ ಎತ್ತರವಾದ ಎರಡು ‘ಕೆರೂಬಿ’ಗಳನ್ನು ಮಾಡಿಸಿ ಅವುಗಳನ್ನು ಗರ್ಭಗುಡಿಯಲ್ಲಿರಿಸಿದನು.


ಚೊಕ್ಕ ಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾಪರಿಶುದ್ಧ ಸ್ಥಳದೊಳಗಿನ ಬಾಗಿಲಿನ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು