ಯೆಹೆಜ್ಕೇಲನು 41:5 - ಕನ್ನಡ ಸತ್ಯವೇದವು C.L. Bible (BSI)5 ಆಮೇಲೆ ಆ ಪುರುಷ ಅಳೆಯಲು ದೇವಸ್ಥಾನದ ಗೋಡೆಯ ಅಗಲ ಮೂರು ಮೀಟರ್. ದೇವಸ್ಥಾನದ ಸುತ್ತುಮುತ್ತಲು ಎಲ್ಲಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ಎರಡೆರಡು ಮೀಟರ್ ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಮೇಲೆ ಅವನು ಅಳತೆ ಮಾಡಲು, ದೇವಸ್ಥಾನದ ಗೋಡೆಯ ಅಗಲ ಆರು ಮೊಳಗಳೂ, ದೇವಸ್ಥಾನದ ಸುತ್ತುಮುತ್ತಲೂ ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಮೇಲೆ ಅವನು ಅಳೆಯಲು ದೇವಸ್ಥಾನದ ಗೋಡೆಯ ಅಗಲ ಆರು ಮೊಳ, ದೇವಸ್ಥಾನದ ಸುತ್ತುಮುತ್ತಲು ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಮೇಲೆ ಆ ಮನುಷ್ಯನು ಆಲಯದ ಗೋಡೆಯನ್ನು ಅಳತೆ ಮಾಡಿದನು. ಅದು ಆರು ಮೊಳ ದಪ್ಪವಾಗಿತ್ತು. ಆಲಯದ ಸುತ್ತಲೂ ಕೋಣೆಗಳಿದ್ದವು. ಅವು ನಾಲ್ಕು ಮೊಳ ಅಗಲವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅನಂತರ ಅವನು ಆಲಯದ ಗೋಡೆಯನ್ನು ಅಳೆದನು; ಅದು ಸುಮಾರು ಮೂರು ಮೀಟರ್ ದಪ್ಪವಾಗಿತ್ತು, ಮತ್ತು ಆಲಯದ ಸುತ್ತಲಿನ ಕೋಣೆಗಳ ಅಗಲವು ಪ್ರತಿ ಬದಿಯಲ್ಲಿ ಸುಮಾರು ಎರಡು ಮೀಟರ್ ಆಗಿತ್ತು. ಅಧ್ಯಾಯವನ್ನು ನೋಡಿ |