Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:11 - ಕನ್ನಡ ಸತ್ಯವೇದವು C.L. Bible (BSI)

11 ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ದೇವಸ್ಥಾನದ ರೂಪ, ಅದರ ವ್ಯವಸ್ಥೆ, ಗಮನಾಗಮನ ನಿಯಮಗಳು, ಸಕಲ ರಚನಾ ವಿಧಾನಗಳು, ಸಮಸ್ತ ವಿಧಿಗಳು, ಸರ್ವನಿರ್ಮಾಣ ರೀತಿಗಳು, ಎಲ್ಲ ಕಟ್ಟಳೆಗಳು ಇವೆಲ್ಲವನ್ನು ಅವರಿಗೆ ತಿಳಿಸಿ, ಅವರು ಅದರ ಪೂರ್ಣಕ್ರಮವನ್ನೂ ಎಲ್ಲ ವಿಧಿಗಳನ್ನೂ ಅನುಸರಿಸಿ ಕೈಗೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತಾವು ನಡಿಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ ನೀನು ದೇವಸ್ಥಾನದ ರೂಪವನ್ನೂ ವ್ಯವಸ್ಥೆಯನ್ನೂ ಗಮನಾಗಮನ ನಿಯಮಗಳನ್ನೂ ಸಕಲ ರಚನಾವಿಧಾನಗಳನ್ನೂ ಸಮಸ್ತ ವಿಧಿಗಳನ್ನೂ ಸರ್ವನಿರ್ಮಾಣರೀತಿಗಳನ್ನೂ ಎಲ್ಲಾ ಕಟ್ಟಳೆಗಳನ್ನೂ ಅವರಿಗೆ ತಿಳಿಸಿ ಅವರು ಅದರ ಪೂರ್ಣಕ್ರಮವನ್ನೂ ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ತಮ್ಮ ಎಲ್ಲಾ ಪಾಪಗಳ ನಿಮಿತ್ತ ನಾಚಿಕೆಪಡುವರು. ಆಲಯದ ವಿನ್ಯಾಸವನ್ನು ಅವರು ತಿಳಿದುಕೊಳ್ಳಲಿ. ಅದು ಹೇಗೆ ಕಟ್ಟಲ್ಪಡಬೇಕೆಂಬುದನ್ನು, ಪ್ರವೇಶ ದ್ವಾರಗಳು ಮತ್ತು ಹೊರಗೆ ಹೋಗುವ ಬಾಗಿಲುಗಳು ಎಲ್ಲಿರಬೇಕೆಂಬುದನ್ನು ಮತ್ತು ಅವುಗಳ ಮೇಲೆ ಇರಬೇಕಾದ ಎಲ್ಲಾ ಚಿತ್ರಗಳನ್ನು ಅವರು ತಿಳಿದುಕೊಳ್ಳಲಿ. ಅದರ ನಿಯಮಗಳನ್ನು, ಕಟ್ಟಳೆಗಳನ್ನು ಅವರಿಗೆ ಬೋಧಿಸಿರಿ. ಅವರು ಎಲ್ಲಾ ಧರ್ಮಬೋಧನೆಗಳನ್ನು ಅನುಸರಿಸುವಂತೆ ಎಲ್ಲಾ ಕಟ್ಟಳೆಗಳನ್ನು ಬರೆದಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಮಾಡಿದ ಎಲ್ಲದಕ್ಕಾಗಿ ನಾಚಿಕೆಪಟ್ಟರೆ, ದೇವಾಲಯದ ರೂಪವನ್ನೂ, ಅದರ ಆಕಾರವನ್ನೂ, ಅದರ ಆಗಮನ ನಿರ್ಗಮನಗಳನ್ನೂ, ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ಕಟ್ಟಳೆಗಳನ್ನೂ ಅವರಿಗೆ ವಿವರಿಸು. ಅವರು ಅದರ ರಚನಾವಿಧಾನಗಳಿಗೆ ನಂಬಿಗಸ್ತರಾಗಿರುವಂತೆಯೂ ಅವರು ಅದರ ಎಲ್ಲಾ ಕಟ್ಟಳೆಗಳನ್ನೂ ಅನುಸರಿಸುವಂತೆಯೂ ಅವರ ಮುಂದೆಯೇ ಇವುಗಳನ್ನು ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:11
10 ತಿಳಿವುಗಳ ಹೋಲಿಕೆ  

ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.


ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.


ನೀವು ಸದಾ ನನ್ನನ್ನು ಸ್ಮರಿಸಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಸಾಂಪ್ರದಾಯಿಕ ರೀತಿನೀತಿಗಳನ್ನು ಸರಿಯಾಗಿ ಪಾಲಿಸಿಕೊಂಡು ಬರುತ್ತಿದ್ದೀರಿ; ಇದಕ್ಕಾಗಿ ನಿಮ್ಮನ್ನು ಮೆಚ್ಚುತ್ತೇನೆ.


ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


“ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೇ ಹೊರಡು. ಅಂದರೆ, ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು: ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.


“ನರಪುತ್ರನೇ, ಇಸ್ರಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು