Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:12 - ಕನ್ನಡ ಸತ್ಯವೇದವು C.L. Bible (BSI)

12 ಇದೇ ದೇವಸ್ಥಾನದ ನಿಯಮ. ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲ ಸುತ್ತುಮುತ್ತಲು ಅತಿಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮ ಇದೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದೇ ದೇವಸ್ಥಾನದ ನಿಯಮ; ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲಾ ಸುತ್ತುಮುತ್ತಲು ಅತಿ ಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇದು ಆಲಯದ ಕಟ್ಟಳೆ: ಪರ್ವತದ ಮೇಲಿನ ಎಲ್ಲಾ ಪ್ರಾಂತ್ಯದ ಮೇರೆಯೊಳಗಿರುವ ಸ್ಥಳವು ಅತಿ ಪರಿಶುದ್ಧವಾದದ್ದು. ಇದು ಆಲಯದ ಕಟ್ಟಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಇದು ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿ ಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧವಾಗಿದೆ. ಇಗೋ, ಇದೇ ಆ ಆಲಯದ ನಿಯಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:12
8 ತಿಳಿವುಗಳ ಹೋಲಿಕೆ  

ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.


ಆಲಯವನ್ನು ನಾಲ್ಕು ಪಾರ್ಶ್ವಗಳಲ್ಲಿಯೂ ಅಳೆದನು; ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರಳತೇ ಕೋಲುದ್ದದ, ಐನೂರಳತೇ ಕೋಲಗಲದ ಗೋಡೆ ಸುತ್ತಮುತ್ತಲಿತ್ತು.


ನಿನ್ನ ಆಜ್ಞೆಗಳು ಪ್ರಭು, ಸುಸ್ಥಿರ I ನಿನ್ನ ಆಲಯಕೆ ಪವಿತ್ರತೆ ಅರ್ಹ I ಯುಗಯುಗಾಂತರಕೂ ಅದು ಅರ್ಹ II


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.


ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು