Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:25 - ಕನ್ನಡ ಸತ್ಯವೇದವು C.L. Bible (BSI)

25 ಏಳು ದಿವಸ ನೀನು ದಿನದಿನವೂ ದೋಷಪರಿಹಾರಕ್ಕಾಗಿ ಒಂದೊಂದು ಹೋತವನ್ನು ಅರ್ಪಿಸು; ಯಾಜಕರು ಸಹ ಕಳಂಕರಹಿತವಾದ ಹೋರಿಯನ್ನೂ ಹಿಂಡಿನಿಂದ ತಂದ ಕಳಂಕರಹಿತವಾದ ಟಗರನ್ನೂ ಅರ್ಪಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಏಳು ದಿನಗಳ ತನಕ ನೀನು ಪ್ರತಿ ದಿನವೂ ದೋಷಪರಿಹಾರ ಬಲಿಗಾಗಿ ಒಂದೊಂದು ಹೋತವನ್ನು ಸಿದ್ಧಮಾಡಬೇಕು. ಯಾಜಕರು ಸಹ ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ಸಿದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಏಳು ದಿವಸ ನೀನು ದಿನದಿನವೂ ದೋಷಪರಿಹಾರಕ್ಕಾಗಿ ಒಂದೊಂದು ಹೋತವನ್ನು ಅರ್ಪಿಸು; ಯಾಜಕರು ಸಹ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದ ತಂದ ಪೂರ್ಣಾಂಗವಾದ ಟಗರನ್ನೂ ಅರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದೋಷಪರಿಹಾರಕಯಜ್ಞಕ್ಕಾಗಿ ಪ್ರತಿದಿವಸ ಏಳು ದಿವಸಗಳ ತನಕ ಒಂದೊಂದು ಆಡನ್ನು ಸಮರ್ಪಿಸಬೇಕು. ಅದೇ ಸಮಯದಲ್ಲಿ ನಿಷ್ಕಳಂಕವಾದ ಒಂದು ಎಳೇ ಹೋರಿ ಮತ್ತು ಟಗರುಗಳನ್ನು ದೋಷಪರಿಹಾರಕಯಜ್ಞಕ್ಕಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಏಳು ದಿನಗಳ ತನಕ ಪ್ರತಿದಿನವೂ ನೀನು ದೋಷಪರಿಹಾರ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:25
5 ತಿಳಿವುಗಳ ಹೋಲಿಕೆ  

ಇದಲ್ಲದೆ, ಈ ನಿಮ್ಮ ಯಾಜಕ ಸೇವಾವೃತ್ತಿಯ ದೀಕ್ಷೆಯನ್ನು ಪೂರೈಸುವುದಕ್ಕೆ ಏಳು ದಿವಸ ಹಿಡಿಯುವುದರಿಂದ ಆವರೆಗೂ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.


ಆದುದರಿಂದ ನೀವು ಆ ಆಜ್ಞೆಯ ಮೇರೆಗೆ ಏಳು ದಿನಗಳೂ ಹಗಲಿರುಳು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ. ಇದು ಸರ್ವೇಶ್ವರನ ಆಜ್ಞೆ.


ಎರಡನೆಯ ದಿನದಲ್ಲಿ, ಕಳಂಕರಹಿತವಾದ ಹೋತವನ್ನು ದೋಷಪರಿಹಾರಕ ಬಲಿಗಾಗಿ ಅರ್ಪಿಸು; ಹೋರಿಯಿಂದ ಬಲಿಪೀಠವನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡತಕ್ಕದ್ದು.


ಹೀಗೆ ಏಳು ದಿವಸ ಬಲಿಪೀಠದ ದೋಷವನ್ನು ಪರಿಹರಿಸುತ್ತಾ, ಅದನ್ನು ಶುದ್ಧಿಮಾಡಿ ಪ್ರತಿಷ್ಠಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು