Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:3 - ಕನ್ನಡ ಸತ್ಯವೇದವು C.L. Bible (BSI)

3 ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು. ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದ‍ನ್ನು ಕಂಡೆನೋ ಅಂಥದನ್ನೇ ಕಂಡೆನು. ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತ ದರ್ಶನದಂಥ ದರ್ಶನ ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಕಂಡು ದರ್ಶನವೂ, ಆತನು ಪಟ್ಟಣವನ್ನು ಹಾಳುಮಾಡಲು ಬಂದಾಗ ನೋಡಿದ ದರ್ಶನದ ಹಾಗೂ, ಕೆಬಾರ್ ನದಿಯ ಹತ್ತಿರ ನನಗಾದ ದರ್ಶನದ ಹಾಗೂ ಇತ್ತು. ಆಗ ನಾನು ಬೋರಲು ಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು; ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದನ್ನು ಕಂಡೆನೋ ಅಂಥದನ್ನು ಕಂಡೆನು; ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತದರ್ಶನದಂಥಾ ದರ್ಶನವು ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನೋಡಿದ ದರ್ಶನವು ಕೆಬಾರ್ ಕಾಲುವೆಯ ಬಳಿ ಕಂಡ ದರ್ಶನದಂತಿತ್ತು. ನಾನು ಸಾಷ್ಟಾಂಗವೆರಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಕಂಡ ದರ್ಶನವು, ಅವನು ಪಟ್ಟಣವನ್ನು ನಾಶಮಾಡಲು ಬಂದಾಗ ನಾನು ನೋಡಿದ ದೃಷ್ಟಿಯಂತೆ ಮತ್ತು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ದರ್ಶನಗಳಂತೆ ಮತ್ತು ಆಗ ನಾನು ಬೋರಲು ಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:3
13 ತಿಳಿವುಗಳ ಹೋಲಿಕೆ  

ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ;


ಆಮೇಲೆ ದೇವರು, “ಈ ಪಟ್ಟಣವನ್ನು ದಂಡಿಸಲಿರುವವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದು ಸಮೀಪಿಸಿರಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.


“ನರಪುತ್ರನೇ, ನೀನು ಈಜಿಪ್ಟಿನ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.


ನಾನೆದ್ದು ಬಯಲು ಪ್ರದೇಶಕ್ಕೆ ಹೊರಟುಬಂದಾಗ, ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತ ದರ್ಶನವು ಆದಂತೆ, ಇಗೋ ಅಲ್ಲಿಯೂ ಸರ್ವೇಶ್ವರನ ಮಹಿಮೆ ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆ.


ರಾಷ್ಟ್ರಗಳ ಮೇಲೂ ರಾಜ್ಯಗಳ ಮೇಲೂ ಅಧಿಕಾರವುಳ್ಳವನನ್ನಾಗಿ ನಾನು ನಿನ್ನನ್ನು ಈ ದಿನ ನೇಮಿಸಿದ್ದೇನೆ. ಇದರಿಂದಾಗಿ ಕಿತ್ತುಹಾಕುವ ಹಾಗು ಕೆಡುವುವ, ನಾಶಪಡಿಸುವ ಹಾಗು ನೆಲಸಮಮಾಡುವ, ಕಟ್ಟುವ ಹಾಗು ನೆಡುವ ಕಾರ್ಯ ನಿನ್ನದು,” ಎಂದರು


ಇಷ್ಟರಲ್ಲಿ ಇಸ್ರಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಸರ್ವೇಶ್ವರ ಕೂಗಿ ಅವನಿಗೆ,


ಆಗ ಇಗೋ, ಇಸ್ರಯೇಲಿನ ದೇವರ ಮಹಿಮಾದ್ಭುತ ದರ್ಶನವು ಬಯಲುಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.


ಬಳಿಕ ಆ ಪುರಷನು ಉತ್ತರ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರೆದುತಂದನು; ಏನಾಶ್ಚರ್ಯ! ನಾನು ನೋಡುತ್ತಿದ್ದಂತೆ ಸರ್ವೇಶ್ವರನ ತೇಜಸ್ಸು ದೇವಾಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆ.


ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು