Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:6 - ಕನ್ನಡ ಸತ್ಯವೇದವು C.L. Bible (BSI)

6 ದೇವಸ್ಥಾನದೊಳಗಿಂದ ನನ್ನನ್ನು ಸಂಬೋಧಿಸಿ ನುಡಿಯುವವನ ಶಬ್ದ ನನ್ನ ಕಿವಿಗೆ ಬಿದ್ದಿತು; ಆ ಪುರುಷ ನನ್ನ ಪಕ್ಕದಲ್ಲೇ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಆಲಯದೊಳಗಿಂದ ನನ್ನ ಸಂಗಡ ಮಾತನಾಡುವವನ ಶಬ್ದವನ್ನು ಕೇಳಿದೆನು. ಆ ಪುರುಷನು ನನ್ನ ಪಕ್ಕದಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ದೇವಸ್ಥಾನದೊಳಗಿಂದ ನನ್ನನ್ನು ಸಂಬೋಧಿಸಿ ನುಡಿಯುವವನ ಶಬ್ದವು ನನ್ನ ಕಿವಿಗೆ ಬಿತ್ತು; ಆ ಪುರುಷನು ನನ್ನ ಪಕ್ಕದಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಲಯದೊಳಗಿಂದ ಯಾರೋ ನನ್ನೊಡನೆ ಮಾತನಾಡಿದಂತೆ ಕೇಳಿಸಿತು. ಅವನು ನನ್ನ ಬಳಿಯಲ್ಲಿ ಇನ್ನೂ ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವುದನ್ನು ಕೇಳಿದೆನು. ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:6
7 ತಿಳಿವುಗಳ ಹೋಲಿಕೆ  

ಅವರು ನನ್ನನ್ನು ಅಲ್ಲಿಗೆ ತರಲು, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ಹುರಿಯನ್ನೂ ಅಳತೆ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲಿ ನಿಂತಿದ್ದನು.


ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.


ಇಗೋ ಕೇಳಿ, ನಗರದ ಕಡೆಯಿಂದ ಕೋಲಾಹಲದ ಶಬ್ದ, ದೇವಾಲಯದಲ್ಲಿ ಶಬ್ದ, ಸರ್ವೇಶ್ವರ ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ !


ಸರ್ವೇಶ್ವರ ಸ್ವಾಮಿ ಮೋಶೆಯನ್ನು ಕರೆದು, ದೇವದರ್ಶನದ ಗುಡಾರದಿಂದ ಅವನ ಸಂಗಡ ಮಾತಾಡಿ, ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ತಿಳಿಸಿದರು.


ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರನ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.


ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು.


ನೀವು ಮತ್ತು ನಿಮ್ಮ ಸಂತತಿಯವರು ಪ್ರತಿನಿತ್ಯವೂ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಈ ದಹನಬಲಿಯನ್ನು ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು