ಯೆಹೆಜ್ಕೇಲನು 43:7 - ಕನ್ನಡ ಸತ್ಯವೇದವು C.L. Bible (BSI)7 ನುಡಿಯುವಾತನು ನನಗೆ ಹೀಗೆ ಹೇಳಿದನು: “ನರಪುತ್ರನೇ, ಇದು ನನ್ನ ಸಿಂಹಾಸನಸ್ಥಾನ, ನನ್ನ ಪಾದಸನ್ನಿಧಿ. ಇಲ್ಲಿ ನಾನು ಇಸ್ರಯೇಲರ ಮಧ್ಯೆ ಸದಾ ವಾಸಿಸುವೆನು. ಇಸ್ರಯೇಲ್ ವಂಶದವರಾಗಲಿ ಅವರ ಅರಸರಾಗಲಿ, ತಮ್ಮ ದೇವದ್ರೋಹದಿಂದ, ಗತಿಸಿದ ಅರಸರ ಶವಗಳಿಂದ ಹಾಗು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮಾತನಾಡುವಾತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಇದು ನನ್ನ ಸಿಂಹಾಸನ, ನನ್ನ ಪಾದ ಪೀಠ, ಇಲ್ಲಿ ನಾನು ಇಸ್ರಾಯೇಲರ ಮಧ್ಯದಲ್ಲಿ ಸದಾ ವಾಸಿಸುವೆನು. ಇಸ್ರಾಯೇಲ್ ವಂಶದವರಾಗಲಿ, ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ, ಗತಿಸಿದ ಅರಸರ ಶವಗಳಿಂದಲೂ ನನ್ನ ಪರಿಶುದ್ಧ ನಾಮವನ್ನು ಅಪವಿತ್ರ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನುಡಿಯುವಾತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಇದು ನನ್ನ ಸಿಂಹಾಸನ ಸ್ಥಾನ, ನನ್ನ ಪಾದಸನ್ನಿಧಿ; ಇಲ್ಲಿ ನಾನು ಇಸ್ರಾಯೇಲ್ಯರ ಮಧ್ಯೆ ಸದಾ ವಾಸಿಸುವೆನು; ಇಸ್ರಾಯೇಲ್‍ವಂಶದವರಾಗಲಿ ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ ಗತಿಸಿದ ಅರಸರ ಶವಗಳಿಂದಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ. ಅಧ್ಯಾಯವನ್ನು ನೋಡಿ |