Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:1 - ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಈ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ಪುನಃ ಕರೆದುತಂದನು; ಅದು ಮುಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಮೂಡಣ ಹೊರಗಣ ಹೆಬ್ಬಾಗಿಲಿಗೆ ಪುನಃ ಕರತಂದನು; ಅದು ಮುಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಬಳಿಕ ನನ್ನನ್ನು ಆ ಮನುಷ್ಯನು ಆಲಯದ ಪೂರ್ವದ್ವಾರಕ್ಕೆ ತಂದನು. ನಾವು ದ್ವಾರದ ಹೊರಗಿದ್ದೆವು. ದ್ವಾರವು ಮುಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ಧಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು. ಅದು ಮುಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:1
12 ತಿಳಿವುಗಳ ಹೋಲಿಕೆ  

ಆಮೇಲೆ ಆ ಪುರುಷ ನನ್ನನ್ನು ಪೂರ್ವದ ಬಾಗಿಲಿಗೆ ಬರಮಾಡಿದನು.


ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವೂ ಪರಿಶುದ್ಧವಾದುವು. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಜನಸಾಮಾನ್ಯರ ಪ್ರಾಕಾರಕ್ಕೆ ಬರುತ್ತಾರೆ,’ ಎಂದನು.


ಅನಂತರ ಆ ಪುರುಷ ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರೆದುತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು. ಒಟ್ಟಾಗಿ ನೆಲೆಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.


ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು ಮೆಟ್ಟಲುಗಳನ್ನು ಹತ್ತಿ ಹೊಸ್ತಿಲಿನ ಅಗಲವನ್ನು ಅಳೆದನು. ಒಂದೊಂದು ಹೊಸ್ತಿಲಿನ ಅಗಲವು ಮೂರು ಮೀಟರ್ ಇತ್ತು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ವಾರದೊಳಗೆ ಕೆಲಸ ನಡೆಯುವ ಆರು ದಿವಸಗಳಲ್ಲಿ ಒಳಗಿನ ಪ್ರಾಕಾರದ ಪೂರ್ವ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲೂ ಅಮಾವಾಸ್ಯೆಯಲ್ಲೂ ತೆರೆದಿರಬೇಕು.


ಆಗ ಸರ್ವೇಶ್ವರನ ತೇಜಸ್ಸು ಪೂರ್ವಬಾಗಿಲ ಮಾರ್ಗವಾಗಿ ದೇವಸ್ಥಾನವನ್ನು ಪ್ರವೇಶಿಸಿತು.


ಆರಿಸಿಕೊಂಡ ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.


ಯೆಹೂದ್ಯರೂ ಜೆರುಸಲೇಮಿನವರೂ ಸರ್ವೇಶ್ವರನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದುಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,


ಮತ್ತೆ, ಯಾಜಕರ ಪ್ರಾಕಾರವನ್ನೂ ಮಹಾಪ್ರಾಕಾರವನ್ನೂ ಮಾಡಿಸಿ ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಇಟ್ಟನು. ಅವುಗಳ ಕದಗಳನ್ನು ಕಂಚಿನ ತಗಡಿನಿಂದ ಹೊದಿಸಿದನು.


ಇದುವರೆಗೂ ಶಲ್ಲೂಮನ ಕುಟುಂಬಸ್ಥರು ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿದ್ದಾರೆ. ಇದಕ್ಕೆ ಮೊದಲು ಅವರು ಲೇವಿಯರ ಪಾಳೆಯಗಳ ಕಾವಲುಗಾರರಾಗಿ ಇದ್ದರು.


“ರಾಜರು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ದಹನಬಲಿಯನ್ನಾಗಲಿ, ಶಾಂತಿಸಮಾಧಾನಬಲಿಗಳನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕೆಂದಿರುವಾಗ ಅವನಿಗಾಗಿ ಪೂರ್ವಹೆಬ್ಬಾಗಿಲನ್ನು ತೆರೆಯಬೇಕು; ಅವನು ಸಬ್ಬತ್‍ದಿನದಲ್ಲಿ ಸಮರ್ಪಿಸುವಂತೆ ದಹನಬಲಿಪ್ರಾಣಿಯನ್ನೂ ಶಾಂತಿಸಮಾಧಾನ ಬಲಿಪ್ರಾಣಿಗಳನ್ನೂ ಸಮರ್ಪಿಸಿ ಹೊರಡಲಿ; ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು