Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:15 - ಕನ್ನಡ ಸತ್ಯವೇದವು C.L. Bible (BSI)

15 “ಆದರೆ ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದರು. ಆದ್ದರಿಂದ ಅವರು ನನ್ನ ಸೇವೆಮಾಡಲು ನನ್ನ ಸನ್ನಿಧಿಗೆ ಬರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ ‘ಆದರೆ ಇಸ್ರಾಯೇಲರು ನನ್ನನ್ನು ಬಿಟ್ಟುಹೋದಾಗ ನನ್ನ ಪರಿಶುದ್ಧಸ್ಥಳದ ಕಾಯಿದೆಯನ್ನು ಪಾಲಿಸಿದ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವಂತೆ ನನ್ನ ಸಮೀಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:15
29 ತಿಳಿವುಗಳ ಹೋಲಿಕೆ  

ಆ ಕ್ಷೇತ್ರ ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರು ಹಾಗು ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರು ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.


“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.


ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ಲೇವಿಯರೂ, ಚಾದೋಕನ ಸಂತಾನದವರೂ ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿ ಕೊಡು. ಇದು ಸರ್ವೇಶ್ವರನಾದ ದೇವರ ನುಡಿ.


ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆ ಬಲಿಪೀಠದ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.


ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.


ನನ್ನ ಹೃನ್ಮನಗಳಿಗೆ ಸರಿಯಾದುದನ್ನೇ ಮಾಡುವ ಒಬ್ಬ ಶ್ರದ್ಧೆಯುಳ್ಳ ಯಾಜಕನನ್ನು ಎಬ್ಬಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ!”


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


“ಸಾರ್ದಿಸ್‍ನಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ದೇವರ ಸಪ್ತ ಆತ್ಮಗಳನ್ನೂ ಸಪ್ತ ನಕ್ಷತ್ರಗಳನ್ನೂ ಹೊಂದಿರುವಾತನು ನೀಡುವ ಸಂದೇಶವಿದು: ನಿನ್ನ ಕೃತ್ಯಗಳನ್ನು ನೀನು ಬಲ್ಲೆ. ಹೆಸರಿಗೆ ಮಾತ್ರ ನೀನು ಜೀವಂತನಾಗಿರುವೆ. ಆದರೆ ವಾಸ್ತವವಾಗಿ ನೀನು ಸತ್ತಂತೆಯೇ ಸರಿ.


“ಥುವತೈರದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಪ್ರಜ್ವಲಿಸುವ ಬೆಂಕಿಯ ಕೆಂಡದಂಥ ಕಣ್ಣುಗಳುಳ್ಳವನೂ ತಾಮ್ರದಂತಿರುವ ಪಾದಗಳುಳ್ಳವನೂ ಆದ ದೇವಪುತ್ರನ ಸಂದೇಶವಿದು:


“ಪೆರ್ಗಮದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಹರಿತವಾದ ಇಬ್ಬಾಯಿಯ ಖಡ್ಗವುಳ್ಳವನು ನೀಡುವ ಸಂದೇಶವಿದು:


“ಸ್ಮುರ್ನದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಮೊದಲನೆಯವನೂ ಕಡೆಯವನೂ, ಮೃತನಾದರೂ ಮೃತ್ಯುಂಜಯನಾದವನು ನೀಡುವ ಸಂದೇಶವಿದು:


“ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:


“ಇಸ್ರಯೇಲರು ನನ್ನನ್ನು ತೊರೆದಾಗ, ನನ್ನಿಂದಗಲಿ ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು, ನನಗೆ ದೂರವಾಗಿಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.


ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗೂ ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಕುಲದಲ್ಲಿ ಇದ್ದೇ ಇರುವನು.”


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.


ನೀನು ಮತ್ತು ನಿನ್ನ ಸಂತತಿಯವರು ಯಾಜಕ ಕರ್ತವ್ಯಗಳನ್ನು ಕೈಗೊಂಡು ಬಲಿಪೀಠದ ಮತ್ತು ಗರ್ಭಗುಡಿಯ ಸೇವೆಯನ್ನು ನಡೆಸಬೇಕು. ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು. ಯಾಜಕ ಪದವಿಯನ್ನು ನಿಮಗೆ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಬಾರದು. ಹಾಕಿದರೆ ಅಂಥವರಿಗೆ ಮರಣಶಿಕ್ಷೆಯಾಗಬೇಕು.”


ಹೀಗಾದರೆ ಇಸ್ರಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿ ಇರುವೆನು; ಇದು ಸರ್ವೇಶ್ವರನಾದ ದೇವರ ನುಡಿ.”


ಆಗ ಅವನು ನನಗೆ ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆ ದೇವಾಲಯ ಪಾರುಪತ್ಯವನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.


ಆ ಬಲಿಪ್ರಾಣಿಯ ಈ ಭಾಗಗಳನ್ನು, ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ತೆಗೆದು ಸರ್ವೇಶ್ವರನಿಗೆ ಹೋಮಮಾಡಬೇಕು.


ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.


ದೇವಸ್ಥಾನದ ವ್ಯವಹಾರವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು. ಆಗ ದೇವರ ಕೋಪ ಮತ್ತೆ ಇಸ್ರಯೇಲರ ಮೇಲೆ ಬಾರದು.


ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು