ಯೆಹೆಜ್ಕೇಲನು 44:19 - ಕನ್ನಡ ಸತ್ಯವೇದವು C.L. Bible (BSI)19 ಅವರು ಹೊರಗಿನ ಪ್ರಾಕಾರಕ್ಕೆ ಅಂದರೆ, ಅಲ್ಲಿನ ಜನರ ಬಳಿಗೆ ಹೊರಡುವಾಗ, ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗಲಿಸಿ ಅವರನ್ನು ಪರಿಶುದ್ಧರಾಗ ಮಾಡದಂತೆ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗುಲಿಸಿ, ಅವರನ್ನು ಪರಿಶುದ್ಧರನ್ನಾಗಿ ಮಾಡದಂತೆ. ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು, ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ಹೊರಗಣ ಪ್ರಾಕಾರಕ್ಕೆ ಅಂದರೆ ಅಲ್ಲಿನ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗಲಿಸಿ ಅವರನ್ನು ಪರಿಶುದ್ಧರಾಗಮಾಡದಂತೆ ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಅವರು ಹೋಗುವಾಗ, ನನ್ನ ಸೇವೆಮಾಡಲು ಅವರು ಧರಿಸಿಕೊಂಡಿದ್ದ ವಸ್ತ್ರಗಳನ್ನು ತೆಗೆದಿಡುವರು. ಒಳಗಿನ ಪ್ರಾಕಾರದಲ್ಲಿರುವ ವಿಶೇಷವಾದ ಉಗ್ರಾಣ ಕೋಣೆಯಲ್ಲಿ ಅವರು ಆ ವಸ್ತ್ರಗಳನ್ನು ಇಡುವರು ಮತ್ತು ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಹೋಗುವಾಗ ಬೇರೆ ಬಟ್ಟೆಗಳನ್ನು ಧರಿಸಿಕೊಳ್ಳುವರು. ಹೀಗೆ ಅವರು ಮಾಡುವದರಿಂದ ಸಾಮಾನ್ಯ ಜನರು ಆ ವಿಶೇಷವಾದ ಬಟ್ಟೆಗಳನ್ನು ಮುಟ್ಟಿದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು. ಅಧ್ಯಾಯವನ್ನು ನೋಡಿ |