Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:23 - ಕನ್ನಡ ಸತ್ಯವೇದವು C.L. Bible (BSI)

23 “ಮೀಸಲಾಗಿದದ್ದಕ್ಕೂ ಮೀಸಲಲ್ಲದ್ದಕ್ಕೂ ಇರುವ ಭೇದವನ್ನು ನನ್ನ ಜನರಿಗೆ ತೋರಿಸಿ, ಶುದ್ಧಾಶುದ್ಧ ವಿವೇಚನೆಯನ್ನು ಅವರಿಗೆ ಬೋಧಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ನನ್ನ ಜನರಿಗೆ ಪವಿತ್ರವಾದದ್ದಕ್ಕೂ ಮತ್ತು ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧ ಹಾಗೂ ಅಶುದ್ಧಗಳ ಭೇದವನ್ನು ತಿಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವನ್ನು ನನ್ನ ಜನರಿಗೆ ತೋರಿಸಿ ಶುದ್ಧಾಶುದ್ಧವಿವೇಚನೆಯನ್ನು ಅವರಿಗೆ ಬೋಧಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಯಾಜಕರು ಜನರಿಗೆ ಪವಿತ್ರ ವಸ್ತುಗಳ ಮತ್ತು ಪವಿತ್ರವಲ್ಲದ ವಸ್ತುಗಳ ಬಗ್ಗೆ ಉಪದೇಶಿಸಬೇಕು. ಒಬ್ಬನನ್ನು ಅಶುದ್ಧನನ್ನಾಗಿ ಮಾಡುವಂಥವುಗಳ ಬಗ್ಗೆ ಇರುವ ನಿಯಮಗಳನ್ನು ಅವರು ಜನರಿಗೆ ಉಪದೇಶಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧಾಶುದ್ಧ ವ್ಯತ್ಯಾಸವನ್ನೂ ವಿವರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:23
15 ತಿಳಿವುಗಳ ಹೋಲಿಕೆ  

ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಉಲ್ಲಂಘಿಸಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಗೊಳಿಸಿದ್ದಾರೆ; ಮೀಸಲಾದುದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ. ಶುದ್ಧಾ ಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯೆ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಅದರ ಪ್ರವಾದಿಗಳು ಬಡಾಯಿಕೊಚ್ಚುವವರು, ವಿಶ್ವಾಸದ್ರೋಹಿಗಳು. ಅದರ ಯಾಜಕರು ಪವಿತ್ರವಾದುದನ್ನು ಹೊಲೆಗೆಡಿಸುವಂಥವರು, ಧರ್ಮವಿಧಿಗಳನ್ನು ಭಂಗಪಡಿಸುವಂಥವರು.


ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.


ಇದರಿಂದ ಶುದ್ಧಾಶುದ್ಧಗಳನ್ನೂ, ಭಕ್ಷ್ಯಾಭಕ್ಷ್ಯಗಳನ್ನೂ ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು


ಯಾಜಕನು ಅದನ್ನು ನೋಡಿ ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇಡಿಸಬೇಕು.


ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.


ಆಲಯವನ್ನು ನಾಲ್ಕು ಪಾರ್ಶ್ವಗಳಲ್ಲಿಯೂ ಅಳೆದನು; ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರಳತೇ ಕೋಲುದ್ದದ, ಐನೂರಳತೇ ಕೋಲಗಲದ ಗೋಡೆ ಸುತ್ತಮುತ್ತಲಿತ್ತು.


ಇವುಗಳಲ್ಲಿ ಶುದ್ಧಾಶುದ್ಧಬೇಧವನ್ನು ನಿರ್ಣಯಿಸುವ ನಿಯಮಗಳು ಇವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು