ಯೆಹೆಜ್ಕೇಲನು 44:24 - ಕನ್ನಡ ಸತ್ಯವೇದವು C.L. Bible (BSI)24 ವ್ಯಾಜ್ಯವಾಗುವಾಗ ಅದನ್ನು ತೀರಿಸಲು ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್‍ಗಳನ್ನು ಜನರು ಆಚರಿಸುವಂತೆ ನೋಡಿಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ವ್ಯಾಜ್ಯವಾಗುವಲ್ಲಿ ಅದನ್ನು ತೀರಿಸಲು ನಿಂತು ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳು ಆಚರಿಸಲ್ಪಡುವಂತೆ ನೋಡಿಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ವ್ಯಾಜ್ಯಗಳಿಗೆ ತೀರ್ಪು ನೀಡುವ ನ್ಯಾಯಾಧಿಶರಾಗಿ ಯಾಜಕರು ಸೇವೆಮಾಡಬೇಕು ಮತ್ತು ನನ್ನ ಆಡಳಿತವನ್ನು ಆಧರಿಸಿ ಅವರು ತೀರ್ಪು ನೀಡಬೇಕು. ಅವರು ವಿಶೇಷವಾದ ಕೂಟಗಳನ್ನು ಏರ್ಪಡಿಸುವಾಗ ನನ್ನ ವಿಧಿನಿಯಮಗಳನ್ನು ಅನುಸರಿಸುವರು ಮತ್ತು ವಿಶೇಷವಾದ ಎಲ್ಲಾ ರಜಾದಿನಗಳನ್ನು ಮತ್ತು ಸಬ್ಬತ್ ದಿನಗಳನ್ನು ಅವರು ಗೌರವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ ‘ವ್ಯಾಜ್ಯವಾಗುವಾಗ ಅದನ್ನು ತೀರಿಸಲು ಯಾಜಕರು ನನ್ನ ನ್ಯಾಯಾನುಸಾರವಾಗಿ ನ್ಯಾಯಾಧಿಪತಿಗಳಾಗಿ ನ್ಯಾಯತೀರಿಸಲಿ. ಅವರು ನನ್ನ ತೀರ್ಪುಗಳನ್ನೂ, ನನ್ನ ನಿಯಮಗಳನ್ನೂ ನಾನು ನೇಮಿಸಿದ ಹಬ್ಬಗಳಲ್ಲಿಯೂ ನನ್ನ ಸಬ್ಬತ್ ದಿನಗಳಲ್ಲಿಯೂ ಪರಿಶುದ್ಧವಾಗಿ ಪಾಲಿಸಬೇಕು. ಅಧ್ಯಾಯವನ್ನು ನೋಡಿ |