Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:25 - ಕನ್ನಡ ಸತ್ಯವೇದವು C.L. Bible (BSI)

25 “ಸತ್ತವರ ಹೆಣವನ್ನು ಸಮೀಪಿಸಿ ತಮ್ಮನ್ನೇ ಅಶುದ್ಧಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ , ಮದುವೆಯಿಲ್ಲದ ತಂಗಿ, ಇವರಿಗಾಗಿ ಒಬ್ಬನು ತನ್ನನ್ನೇ ಅಶುದ್ಧಮಾಡಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಸತ್ತವರ ಹೆಣವನ್ನು ಸಮೀಪಿಸಿ, ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ, ಮದುವೆಯಿಲ್ಲದ ತಂಗಿ, ಇವರಿಗೋಸ್ಕರ ಒಬ್ಬನು ತನ್ನನ್ನು ಅಪವಿತ್ರ ಮಾಡಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸತ್ತವರ ಹೆಣವನ್ನು ಸಮೀಪಿಸಿ ತಮ್ಮನ್ನು ಅಪವಿತ್ರಮಾಡಿಕೊಳ್ಳಬಾರದು; ಆದರೆ [ಸತ್ತ] ತಂದೆ, ತಾಯಿ, ಮಗನು, ಮಗಳು, ತಮ್ಮ, ಮದುವೆಯಿಲ್ಲದ ತಂಗಿ, ಇವರಿಗೋಸ್ಕರ ಒಬ್ಬನು ತನ್ನನ್ನು ಅಪವಿತ್ರಮಾಡಿಕೊಳ್ಳಬಹುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸತ್ತ ಹೆಣದ ಬಳಿಗೆ ಹೋಗಿ ಅವರು ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು. ಆದರೆ ಸತ್ತವರು ತಮ್ಮ ಹೆತ್ತವರಾಗಲಿ ಮಕ್ಕಳಾಗಲಿ ಅಥವಾ ಮದುವೆಯಾಗದಿದ್ದ ಸಹೋದರ ಸಹೋದರಿಯರಾಗಲಿ ಆಗಿದ್ದಲ್ಲಿ ಅವರು ತಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ ‘ಯಾಜಕರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆತಾಯಿ, ಮಗ, ಮಗಳು, ಸಹೋದರ, ಗಂಡನಿಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:25
7 ತಿಳಿವುಗಳ ಹೋಲಿಕೆ  

ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


“ಆರೋನನ ಸಂತತಿಯವರಲ್ಲಿ ಯಾವನಿಗಾದರು ಕುಷ್ಟರೋಗವಾಗಲಿ, ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನು, ವೀರ್ಯಸ್ಖಲನ ಮಾಡಿಕೊಂಡವನು.


ಅಂಥವನನ್ನು ಶುದ್ಧನಾದ ಮೇಲೂ, ಏಳು ದಿವಸ ಪ್ರತ್ಯೇಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು