Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:3 - ಕನ್ನಡ ಸತ್ಯವೇದವು C.L. Bible (BSI)

3 ರಾಜರು ಸರ್ವೇಶ್ವರನ ಸನ್ನಿಧಿಯಲ್ಲಿ ಹವಿರ್ಭೋಜನ ಮಾಡುವುದಕ್ಕೆ ಇಲ್ಲಿ ಕುಳಿತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಹವಿರ್ಭೋಜನಮಾಡುವದಕ್ಕೆ ಇಲ್ಲಿ ಪ್ರಭುವಾಗಿ ಕೂತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಸೇರಿ ಅದೇ ಮಾರ್ಗವಾಗಿ ಹೊರಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರ ಅಧಿಪತಿಯು ಯೆಹೋವನ ಸನ್ನಿಧಿಯಲ್ಲಿ ಊಟಮಾಡಲು ಬರುವಾಗ ಅವನು ಮಾತ್ರ ಈ ದ್ವಾರದ ಬಳಿ ಕುಳಿತುಕೊಳ್ಳಬಹುದು. ಅಧಿಪತಿಯು ದ್ವಾರದ ಮಂಟಪದ ಮೂಲಕ ಪ್ರವೇಶಿಸಬೇಕು ಮತ್ತು ಅದೇ ಮಾರ್ಗದಲ್ಲಿ ಹೊರ ಬರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದು ಪ್ರಭುವಿಗಾಗಿ ಇದೆ; ಪ್ರಭುವು ಅವರೊಳಗೆ ಕುಳಿತುಕೊಂಡು, ಯೆಹೋವ ದೇವರ ಮುಂದೆ ರೊಟ್ಟಿಯನ್ನು ತಿನ್ನಬೇಕು. ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:3
18 ತಿಳಿವುಗಳ ಹೋಲಿಕೆ  

ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ದಹನಬಲಿ ಪ್ರಾಣಿಯನ್ನು ಶಾಂತಿಸಮಾಧಾನ ಬಲಿಪ್ರಾಣಿಯನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಿಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.


ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ಸರ್ವೇಶ್ವರನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ದಾಸ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.


ಅಲ್ಲದೆ, ಯಕೋಬನು ಆ ಬೆಟ್ಟದ ಮೇಲೆ ಬಲಿಯನ್ನರ್ಪಿಸಿ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರೆಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲಿದ್ದರು.


ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು; ಅದು ನಾಲ್ಕು ಮೀಟರ್ ಇತ್ತು; ನಿಲವು ಕಂಬಗಳ ಅಗಲ ಒಂದೊಂದು ಮೀಟರ್. ಹೆಬ್ಬಾಗಿಲ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು.


ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ತನ್ನ ಸ್ಥಳದಲ್ಲೇ ನಿಂತು, ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿ ಸರ್ವೇಶ್ವರನಿಗೆ ಪ್ರಮಾಣಮಾಡಿದನು.


ಬೆಳೆಮಾಡಿದವರೇ ಕಾಳನು ತಿಂದು ಸ್ತುತಿಸುವರು ಸರ್ವೇಶ್ವರನನು; ದ್ರಾಕ್ಷಿ ಕಿತ್ತವರೇ ಕುಡಿವರು ಈ ರಸವನು ನನ್ನಾಲಯದ ಅಂಗಳದೊಳು.”


ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.


ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತೂರಿಗಳನ್ನು ಊದುವವರು ಅರಸನ ಹತ್ತಿರವಿದ್ದರು; ಜನಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನಪದ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆ ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


“ರಾಜರು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ದಹನಬಲಿಯನ್ನಾಗಲಿ, ಶಾಂತಿಸಮಾಧಾನಬಲಿಗಳನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕೆಂದಿರುವಾಗ ಅವನಿಗಾಗಿ ಪೂರ್ವಹೆಬ್ಬಾಗಿಲನ್ನು ತೆರೆಯಬೇಕು; ಅವನು ಸಬ್ಬತ್‍ದಿನದಲ್ಲಿ ಸಮರ್ಪಿಸುವಂತೆ ದಹನಬಲಿಪ್ರಾಣಿಯನ್ನೂ ಶಾಂತಿಸಮಾಧಾನ ಬಲಿಪ್ರಾಣಿಗಳನ್ನೂ ಸಮರ್ಪಿಸಿ ಹೊರಡಲಿ; ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.


ಸರ್ವೇಶ್ವರನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಈ ಆಹಾಜನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು