Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:30 - ಕನ್ನಡ ಸತ್ಯವೇದವು C.L. Bible (BSI)

30 ಎಲ್ಲ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದು ಹಾಗು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲ ಪದಾರ್ಥಗಳು ಅವರದಾಗಬೇಕು. ನಿಮ್ಮ ಮನೆ ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದನ್ನು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಎಲ್ಲಾ ಪ್ರಥಮಫಲವು ಯಾಜಕರಿಗೆ ಸಲ್ಲತಕ್ಕದ್ದು. ಅಲ್ಲದೆ ನೀವು ನಾದುವ ಮೊದಲನೆ ರೊಟ್ಟಿಯ ಹಿಟ್ಟು ಯಾಜಕರಿಗೆ ಕೊಡಬೇಕು. ಹೀಗೆ ಮಾಡಿದ್ದಲ್ಲಿ ನೀವು ಆಶೀರ್ವದಿಸಲ್ಪಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕನದ್ದಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ನೀವು ಯಾಜಕರಿಗೆ ಕೊಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:30
17 ತಿಳಿವುಗಳ ಹೋಲಿಕೆ  

ಚಾದೋಕ್ ಸಂತಾನದ ಮಹಾಯಾಜಕ ಅಜರ್ಯನು, “ಜನರು ದೇವರಾದ ಸರ್ವೇಶ್ವರನಿಗೆ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಸರ್ವೇಶ್ವರ ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.


ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗು ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನು ಅವರಿಗೆ ಕೊಡಬೇಕು.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ವಾಸ್ತವವಾಗಿ ಇಸ್ರಯೇಲರ ಜೇಷ್ಠರೆಲ್ಲರು ನನ್ನ ಸೊತ್ತು, ಈಜಿಪ್ಟ್ ದೇಶದಲ್ಲಿ ಜೇಷ್ಠವಾದುದೆಲ್ಲವನ್ನು ನಾನು ಸಂಹಾರಮಾಡಿದಾಗ ಇಸ್ರಯೇಲರಲ್ಲಿಯ ಜೇಷ್ಠ ಮನುಷ್ಯರನ್ನೂ ಪಶುಪ್ರಾಣಿಗಳನ್ನೂ ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆ. ಆದರೆ ಈಗ ಅಂಥವರಿಗೆ ಬದಲಾಗಿ ಲೇವಿಯರನ್ನು ಆರಿಸಿಕೊಂಡಿದ್ದೇನೆ, ಅವರು ಸರ್ವೇಶ್ವರನಾದ ನನ್ನವರು.”


“ನಿಮ್ಮ ಬೆಳೆಯ ಪ್ರಥಮ ಫಲದಲ್ಲಿ ಅತಿಶ್ರೇಷ್ಠವಾದುದ್ದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. "ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


“ನಿಮ್ಮ ಕಣದಿಂದ ಹಾಗು ಆಲೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸಲು ತಡಮಾಡಬಾರದು.


ನಿಮಗೂ ನಿಮ್ಮ ಪಶುಪ್ರಾಣಿಗಳಿಗೂ ಹುಟ್ಟುವ ಚೊಚ್ಚಲು ಫಲವನ್ನೆಲ್ಲ, ಅವು ಗಂಡಾದ ಪಕ್ಷಕ್ಕೆ, ಸರ್ವೇಶ್ವರನ ಪಾಲೆಂದು ತಿಳಿದು ಅವರಿಗೆ ಸಮರ್ಪಿಸಬೇಕು.


“ಚೊಚ್ಚಲಾಗಿ ಹುಟ್ಟಿದ್ದೆಲ್ಲವನ್ನು ನನಗೆ ಮೀಸಲಾಗಿಡು; ಇಸ್ರಯೇಲರಲ್ಲಿ ಮನುಷ್ಯರಿಗಾಗಲಿ ಪಶುಪ್ರಾಣಿಗಳಿಗಾಗಲಿ ಹುಟ್ಟಿದ ಪ್ರಥಮ ಗರ್ಭಫಲ ನನ್ನದೇ,” ಎಂದು ಹೇಳಿದರು.


ಹಿಟ್ಟಿನಲ್ಲಿ ಮೊದಲ ಹಿಡಿ ನೈವೇದ್ಯ ಆದಮೇಲೆ ಹಿಟ್ಟಿನ ರಾಶಿಯೆಲ್ಲಾ ನೈವೇದ್ಯ ಆದಂತೆಯೇ. ಅಂತೆಯೇ, ಬೇರು ದೇವರದಾಗಿದ್ದ ಮೇಲೆ ರೆಂಬೆಗಳೂ ದೇವರಿಗೆ ಸೇರಿದವು ಅಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು