Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:4 - ಕನ್ನಡ ಸತ್ಯವೇದವು C.L. Bible (BSI)

4 ಬಳಿಕ ಆ ಪುರಷನು ಉತ್ತರ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರೆದುತಂದನು; ಏನಾಶ್ಚರ್ಯ! ನಾನು ನೋಡುತ್ತಿದ್ದಂತೆ ಸರ್ವೇಶ್ವರನ ತೇಜಸ್ಸು ದೇವಾಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬಳಿಕ ಆ ಪುರುಷನು ಬಡಗಣ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರತಂದನು; ಆಹಾ, ನಾನು ನೋಡಲಾಗಿ ಯೆಹೋವನ ತೇಜಸ್ಸು ಯೆಹೋವನ ಆಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಬಳಿಕ ನನ್ನನ್ನು ಉತ್ತರದ ದ್ವಾರದ ಮೂಲಕ ಆಲಯದ ಮುಂಭಾಗಕ್ಕೆ ಅವನು ಕರೆದುಕೊಂಡು ಹೋದನು. ನಾನು ನೋಡಿದಾಗ ಯೆಹೋವನ ತೇಜಸ್ಸು ಆತನ ಆಲಯವನ್ನು ತುಂಬುತ್ತಿತ್ತು. ನಾನು ಸಾಷ್ಟಾಂಗವೆರಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು. ನಾನು ನೋಡಿದೆ ಯೆಹೋವ ದೇವರ ಮಹಿಮೆಯು ಯೆಹೋವ ದೇವರ ಆಲಯವನ್ನು ತುಂಬಿಕೊಂಡಿತು, ನಾನು ಬೋರಲು ಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:4
18 ತಿಳಿವುಗಳ ಹೋಲಿಕೆ  

ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ.


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ನಾನೆದ್ದು ಬಯಲು ಪ್ರದೇಶಕ್ಕೆ ಹೊರಟುಬಂದಾಗ, ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತ ದರ್ಶನವು ಆದಂತೆ, ಇಗೋ ಅಲ್ಲಿಯೂ ಸರ್ವೇಶ್ವರನ ಮಹಿಮೆ ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆ.


ಇದಲ್ಲದೆ ಹೊರಗಣ ಪ್ರಾಕಾರದ ಉತ್ತರದ ಹೆಬ್ಬಾಗಿಲಿನ ಅಗಲವನ್ನೂ ಉದ್ದವನ್ನೂ ಅಳೆದನು.


ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.


ಉತ್ತರ ಹೆಬ್ಬಾಗಿಲ ಪ್ರವೇಶಸ್ಥಾನದ ಮೆಟ್ಟಲುಗಳ ಹತ್ತಿರ, ಆ ಬಾಗಿಲ ಕೈಸಾಲೆಯ ಹೊರಗೆ, ಒಂದು ಕೊನೆಯಲ್ಲಿ ಎರಡು ಪೀಠಗಳು ಇದ್ದವು.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು.


ನನ್ನನ್ನು ಸರ್ವೇಶ್ವರನ ಆಲಯದ ಉತ್ತರ ಬಾಗಿಲ ಮುಂದಕ್ಕೆ ಕರೆತಂದರು; ಇಗೋ, ಅಲ್ಲಿ ಹೆಂಗಸರು ‘ತಮ್ಮೂಜ್’ ದೇವತೆಗಾಗಿ ಅಳುತ್ತಾ ಕುಳಿತಿದ್ದರು.


ಆಮೇಲೆ ಅವನು ನನ್ನನ್ನು ಉತ್ತರ ಬಾಗಿಲಿಗೆ ಕರೆದುತಂದು ಅದನ್ನೂ ಅದರ ಗೋಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಅಲ್ಲಿಯೂ ಆ ಅಳತೆಗಳೇ ಕಂಡುಬಂದವು;


ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು