ಯೆಹೆಜ್ಕೇಲನು 44:5 - ಕನ್ನಡ ಸತ್ಯವೇದವು C.L. Bible (BSI)5 ಆಗ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಸರ್ವೇಶ್ವರನ ಆಲಯದ ಸಕಲ ನಿಯಮ ನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನದಟ್ಟು ಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನವಿಧಿಗಳನ್ನು ಗಮನಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಯೆಹೋವನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ ಮತ್ತು ಪವಿತ್ರಾಲಯದ ಪ್ರವೇಶವನ್ನೂ, ಪರಿಶುದ್ಧ ಸ್ಥಳದ ಪ್ರತಿಯೊಂದು ಹಾಗುಹೋಗುಗಳನ್ನೂ ಗಮನಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಯೆಹೋವನು ನನಗೆ ಹೀಗೆ ಹೇಳಿದನು - ನರಪುತ್ರನೇ, ಯೆಹೋವನ ಆಲಯದ ಸಕಲ ನಿಯಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವದನ್ನೆಲ್ಲಾ ನೀನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮಂದಟ್ಟುಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನ ವಿಧಿಗಳನ್ನು ಗಮನಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಕಿವಿಯಾರೆ ಕೇಳು, ಕಣ್ಣಾರೆ ನೋಡಿ ಅರ್ಥಮಾಡಿಕೊ. ಪವಿತ್ರಾಲಯದ ಎಲ್ಲಾ ವಿಧಿನಿಯಮಗಳನ್ನು ಗಮನವಿಟ್ಟು ಕೇಳು. ಆಲಯದೊಳಕ್ಕೆ ಬರುವ ಪ್ರವೇಶ ದ್ವಾರಗಳನ್ನೂ ಪವಿತ್ರಸ್ಥಳದಿಂದ ಹೊರ ಹೋಗುವ ಪ್ರವೇಶ ದ್ವಾರಗಳನ್ನೂ ಗಮನವಿಟ್ಟು ನೋಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಯೆಹೋವ ದೇವರ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನಿಯಮದ ವಿಷಯವಾಗಿಯೂ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ. ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧಸ್ಥಳದ ಪ್ರತಿಯೊಂದು ಹಾದುಹೋಗುಗಳನ್ನೂ ಗಮನಿಸು. ಅಧ್ಯಾಯವನ್ನು ನೋಡಿ |