Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:9 - ಕನ್ನಡ ಸತ್ಯವೇದವು C.L. Bible (BSI)

9 “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಸ್ರಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರಲ್ಲಿ ಸೇರಿಕೊಂಡಿರುವ ಮ್ಲೇಚ್ಫರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲರೊಂದಿಗೆ ವಾಸವಾಗಿರುವ ಅನ್ಯಜನರೊಳಗೆ ತನುಮನಗಳಲ್ಲಿ ಸುನ್ನತಿಯಾಗಿಲ್ಲದವನು ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲರೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:9
13 ತಿಳಿವುಗಳ ಹೋಲಿಕೆ  

“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.


ಜೆರುಸಲೇಮಿನಲ್ಲಿಯೂ ಜುದೇಯದಲ್ಲಿಯೂ ಇರುವ ಸಕಲ ಅಡಿಗೆಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಸಮರ್ಪಿತವಾಗಿರುವುವು. ಬಲಿಯನ್ನರ್ಪಿಸಲು ಬರುವವರೆಲ್ಲರೂ ಬಲಿಪಶುವಿನ ಮಾಂಸವನ್ನು ಬೇಯಿಸಲು ಈ ಪಾತ್ರೆಗಳನ್ನು ಬಳಸುವರು. ಆ ದಿನ ಬಂದಾಗ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಯಾವ ವರ್ತಕನೂ ಇರನು.


ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು.


ನಿನ್ನ ಆಜ್ಞೆಗಳು ಪ್ರಭು, ಸುಸ್ಥಿರ I ನಿನ್ನ ಆಲಯಕೆ ಪವಿತ್ರತೆ ಅರ್ಹ I ಯುಗಯುಗಾಂತರಕೂ ಅದು ಅರ್ಹ II


ದುರ್ಜನರಿಗೆ ದೇವ ಹೇಳುವನು ಇಂತೆಂದು I “ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು? I ನನ್ನ ನಿಬಂಧನೆಗಳ ನೀವು ಜಪಿಸುವುದೆಂತು?” II


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ನಾನು ಅವರಿಗೆ ವಿರುದ್ಧವಾಗಿ ವರ್ತಿಸಿ ಶತ್ರುದೇಶದಲ್ಲಿ ಸೆರೆ ಸೇರಿಸಬೇಕಾಯಿತೆಂದು ಅರಿತುಕೊಂಡು, ತಮ್ಮ ಮೊಂಡುತನವನ್ನು ಬಿಟ್ಟು, ನನ್ನ ಆಜ್ಞೆಗೆ ತಲೆಬಾಗಿ, ತಮ್ಮ ಪಾಪ ಪರಿಣಾಮದ ಶಿಕ್ಷೆಯನ್ನು ಸ್ವೀಕರಿಸಿದ್ದೇ ಆದರೆ,


ನಿಮ್ಮ ಬಳಿ ವಾಸವಾಗಿರುವ ವಿದೇಶೀಯನೊಬ್ಬನು ಸರ್ವೇಶ್ವರನಿಗೆ ಈ ಪಾಸ್ಕಹಬ್ಬವನ್ನು ಕೊಂಡಾಡಬೇಕೆಂಬ ಆಸೆಯಿದ್ದರೆ ಅವನೂ ಅವನ ಕುಟುಂಬಕ್ಕೆ ಸೇರಿದ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ಬಳಿಕ ಅವನು ಬಂದು ಈ ಹಬ್ಬವನ್ನು ಆಚರಿಸಬಹುದು. ಅಂಥವನು ಸ್ವದೇಶದವನಂತೆ ಆಗುತ್ತಾನೆ. ಆದರೆ ಸುನ್ನತಿ ಮಾಡಿಸಿಕೊಳ್ಳದ ಯಾವನೂ ಆ ಭೋಜನದಲ್ಲಿ ಭಾಗಿ ಆಗಕೂಡದು.


ಏಕೆಂದರೆ ನೀವು ಈಜಿಪ್ಟ್ ದೇಶದಿಂದ ಬಂದಾಗ ಅವರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರೂರಿನಿಂದ ಅವನನ್ನು ಕರೆಸಿದರು.


ಪ್ರಭುವಿನ ಶಿಖರವನು ಏರಬಲ್ಲವನಾರು ? I ಆ ನಿವಾಸದಲಿ ನಿಲ್ಲಲು ಯೋಗ್ಯನಾರು ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು