Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:1 - ಕನ್ನಡ ಸತ್ಯವೇದವು C.L. Bible (BSI)

1 ನೀವು ನಾಡನ್ನು ಸೊತ್ತುಸೊತ್ತಾಗಿ ಹಂಚುವಾಗ ಒಂದು ಭಾಗವನ್ನು ಮೀಸಲಾಗಿ ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸಮರ್ಪಿಸಬೇಕು; ಅದರ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್; ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀವು ದೇಶವನ್ನು ಸ್ವತ್ತಾಗಿ ಹಂಚುವಾಗ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಬೇಕು. ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ ಇರಲಿ. ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೀವು ದೇಶವನ್ನು ಸ್ವಾಸ್ತ್ಯಸ್ವಾಸ್ತ್ಯವಾಗಿ ಹಂಚುವಾಗ ಒಂದು ಭಾಗವನ್ನು ಮೀಸಲಾಗಿ ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು; ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ; ಆ ಪ್ರಾಂತವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನೀನು ಚೀಟುಹಾಕಿ ಇಸ್ರೇಲರ ಕುಲಗಳಿಗನುಸಾರವಾಗಿ ದೇಶವನ್ನು ವಿಂಗಡಿಸಬೇಕು. ಆ ಸಮಯದಲ್ಲಿ ಒಂದು ಭಾಗವನ್ನು ಪ್ರತ್ಯೇಕಿಸಿಡಬೇಕು. ಅದು ಯೆಹೋವನಿಗೋಸ್ಕರ ಮೀಸಲಾಗಿಡಲ್ಪಟ್ಟದ್ದು. ಆ ಪ್ರದೇಶವು ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಹತ್ತು ಸಾವಿರ ಮೊಳ ಅಗಲವಿರುವದು. ಈ ಎಲ್ಲಾ ಜಾಗವು ಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ ‘ಇದಲ್ಲದೆ ನೀವು ದೇಶವನ್ನು ಚೀಟುಹಾಕಿ ಸೊತ್ತಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಯೆಹೋವ ದೇವರಿಗೆ ಕಾಣಿಕೆಯಾಗಿ ಕೊಡಬೇಕು. ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ. ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:1
15 ತಿಳಿವುಗಳ ಹೋಲಿಕೆ  

ನೀವು ಇಸ್ರಯೇಲಿನ ಕುಲಗಳಿಗೆ ಸೊತ್ತಾಗಿ ಹಂಚಿಕೊಡಬೇಕಾದ ನಾಡು ಇದೇ; ಕುಲಗಳ ಪಾಲುಗಳೂ ಇವೇ; ಇದು ಸರ್ವೇಶ್ವರನಾದ ದೇವರ ನುಡಿ.


ಅದಕ್ಕನುಸಾರವಾಗಿ ಮೋಶೆ ಇಸ್ರಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ ನಾಡು ಇದೇ. ಒಂಬತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.


ನಿನ್ನ ಆಸ್ತಿಯನ್ನರ್ಪಿಸಿ ಸರ್ವೇಶ್ವರನನ್ನು ಸನ್ಮಾನಿಸು, ನಿನ್ನ ಬೆಳೆಯ ಪ್ರಥಮ ಫಲವನ್ನು ಕಾಣಿಕೆಯಾಗಿಕೊಡು.


ಸರ್ವೇಶ್ವರಸ್ವಾಮಿ ಮೋಶೆಯ ಮೂಲಕ ಆಜ್ಞಾಪಿಸಿದಂತೆ ಜೋರ್ಡನಿನ ಪಶ್ಚಿಮದ ಕಾನಾನ್ ನಾಡನ್ನು ಚೀಟುಹಾಕಿ ಇಸ್ರಯೇಲರ ಒಂಬತ್ತುವರೆ ಕುಲದವರಿಗೆ ಸ್ವಂತ ಆಸ್ತಿಯಾಗಿ ಹಂಚಿಕೊಟ್ಟರು.


ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗಿರುವ ಸಿದೋನ್ಯರ ಎಲ್ಲ ಪರ್ವತ ಪ್ರಾಂತ್ಯಗಳು.


“ಭೂಮಿಯನ್ನು ಶಾಶ್ವತವಾಗಿ ವಿಕ್ರಯಿಸಿ ಬಿಡಬಾರದು. ಏಕೆಂದರೆ ಭೂಮಿ ನನ್ನದು. ನೀವಾದರೋ ಪರವಾಸಿಗಳು, ನನ್ನ ಆಶ್ರಯದಲ್ಲಿ ತಂಗಿರುವವರು.


“ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಯೇಲರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಯೇಲರಿಗೆ ನಾಡನ್ನು ಹಂಚಿಕೊಡುವಾಗ ಇವುಗಳನ್ನು ಕೂಡ ಸೇರಿಸಿ ನಾಡನ್ನೆಲ್ಲಾ ಒಂಬತ್ತು ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಪಾಲುಮಾಡಿಕೊಡು,” ಎಂದರು.


ಉಳಿದ ಎರಡುವರೆ ಕುಲಗಳ ಜನರಿಗೆ ಜೋರ್ಡನಿನ ಆಚೆಯಲ್ಲಿ ಮೋಶೆಯೇ ಸೊತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಡಲಿಲ್ಲ.


ಪೂರ್ವದಿಕ್ಕಿನಲ್ಲಿ ಉದ್ದಕ್ಕೂ ಅಳತೇ ಕೋಲಿನಿಂದ ಐನೂರು ಕೋಲಳೆದನು.


ಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು ಹಾಗೂ ಇಸ್ರಯೇಲ್ ಕುಲಾಧಿಪತಿಗಳು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು