Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:12 - ಕನ್ನಡ ಸತ್ಯವೇದವು C.L. Bible (BSI)

12 ಒಂದು ಶೇಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ತೊಲಾ ತೂಕದ್ದಾಗಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು [ಅಥವಾ] ಹದಿನೈದು ತೊಲೆಯ ತೂಕದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಂದು ಶೆಕೆಲ್ ಇಪ್ಪತ್ತು ಗೆರಾ ಇರಬೇಕು. ಒಂದು ಮಿನವು ಅರವತ್ತು ಶೆಕೆಲ್‌ನಷ್ಟು ಇರಬೇಕು. ಅದು ಇಪ್ಪತ್ತು ಶೆಕೆಲ್ ಮತ್ತು ಇಪ್ಪತ್ತೈದು ಶೆಕೆಲ್ ಮತ್ತು ಹದಿನೈದು ಶೆಕೆಲ್‌ಗಳಿಗೆ ಸಮಾನವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಒಂದು ಶೆಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು. ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು ಶೇಕೆಲು, ಇಪ್ಪತ್ತೈದು ಶೇಕೆಲು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:12
7 ತಿಳಿವುಗಳ ಹೋಲಿಕೆ  

ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನು ನನಗೆ ಅರ್ಧ ಶೆಕೆಲ್‍ ನಾಣ್ಯದ ಮೇರೆಗೆ ತೆರಿಗೆ ಕಟ್ಟಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಅರ್ಧರ್ಧ ನಾಣ್ಯವನ್ನು ತೆರಿಗೆಯಾಗಿ ಕೊಡಬೇಕು.


ದೇವರ ಸೇವೆಗೆ ನಿಗದಿಯಾದ ನಾಣ್ಯಗಳ ಮೇರೆಗೆ ತೆಗೆದುಕೊಳ್ಳಬೇಕು.


ದೇವರ ಸೇವೆಯಲ್ಲಿ ಬಳಕೆಯಲ್ಲಿರುವ ‘ಶೆಕೆಲ್’ ಒಂದಕ್ಕೆ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಬೆಲೆಯನ್ನು ನಿಗದಿಮಾಡಬೇಕು.


ನಿನ್ನ ಆಹಾರದ ತೂಕ ದಿನವೊಂದಕ್ಕೆ 230 ಗ್ರಾಂ ಇರಲಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನೈವೇದ್ಯವನ್ನೂ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡುವುದಕ್ಕಾಗಿ ಸಮರ್ಪಿಸತಕ್ಕದೇನೆಂದರೆ: ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು;


ಜನಗಣತಿಯಲ್ಲಿ ಸೇರಿಸಲಾದ ಇಪ್ಪತ್ತು ವರ್ಷದ ಹಾಗು ಅದಕ್ಕೂ ಹೆಚ್ಚು ವಯಸ್ಸಿನವರು ಈ ತೆರಿಗೆಯನ್ನು ನನಗೆ ಕಟ್ಟಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು