Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:17 - ಕನ್ನಡ ಸತ್ಯವೇದವು C.L. Bible (BSI)

17 ಉತ್ಸವಗಳಲ್ಲೂ ಅಮಾವಾಸ್ಯೆಗಳಲ್ಲೂ ಸಬ್ಬತ್ತುಗಳಲ್ಲೂ ಇಸ್ರಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲೂ ದಹನಬಲಿ ಪ್ರಾಣಿ, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವುದು ರಾಜನ ಕರ್ತವ್ಯ; ಇಸ್ರಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕ ಬಲಿಪ್ರಾಣಿ, ಧಾನ್ಯನೈವೇದ್ಯ, ದಹನಬಲಿಪ್ರಾಣಿ, ಶಾಂತಿಸಮಾಧಾನ ಬಲಿಪ್ರಾಣಿ ಇವುಗಳನ್ನು ಒಪ್ಪಿಸತಕ್ಕದ್ದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹಬ್ಬಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವಿಶ್ರಾಂತಿಯ ದಿನಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವುದು ಪ್ರಭುವಿನ ಕೆಲಸವಾಗಿರುವುದು. ಆತನು ಇಸ್ರಾಯೇಲ್ಯರಿಗೆ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಳನ್ನು, ಧಾನ್ಯದ ಅರ್ಪಣೆಗಳನ್ನು, ದಹನಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಒದಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:17
34 ತಿಳಿವುಗಳ ಹೋಲಿಕೆ  

ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಇದಲ್ಲದೆ, ಅವನು ಸರ್ವೇಶ್ವರನ ಧರ್ಮಶಾಸ್ತ್ರ ವಿಧಿಗನುಸಾರ ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗು ಜಾತ್ರೆಗಳಲ್ಲಿ ಸಮರ್ಪಣೆ ಆಗತಕ್ಕ ದಹನ ಬಲಿಗಳಿಗೆ ಬೇಕಾದುದನ್ನೆಲ್ಲಾ ತನ್ನ ಆಸ್ತಿಯಿಂದಲೇ ಸಲ್ಲಿಸಲಾಗುವುದೆಂದು ಸೂಚಿಸಿದನು.


ನಮಗೊಂದು ಬಲಿಪೀಠವಿದೆ; ಅಲ್ಲಿ ಅರ್ಪಿಸಲಾಗುವ ಬಲಿಯನ್ನು ಭುಜಿಸಲು ಯೆಹೂದ್ಯ ಗುಡಾರಗಳಲ್ಲಿ ಸೇವೆಸಲ್ಲಿಸುವ ಯಾಜಕರಿಗೆ ಹಕ್ಕಿಲ್ಲ.


ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಬಲಿಪೀಠದ ಮೇಲೆ ನಿ‍ಮ್ಮ ಪರವಾಗಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಸರ್ವೇಶ್ವರನಾದ ದೇವರ ನುಡಿ.”


ಈ ಕಾರಣ, ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ತೀರ್ಮಾನಿಸಿಕೊಂಡರು. ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು I ಅಡ್ಡಬೀಳುವರವನಿಗೆ ಮರ್ತ್ಯಮಾನವರೆಲ್ಲರು II


ಈ ಪ್ರಕಟನೆಯನ್ನು ಕೇಳಿ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಕ್ಕೆ ಸೇರಿದ ಮುಖ್ಯಸ್ಥರು, ಯಾಜಕರು, ಲೇವಿಯರು ಹಾಗು ದೈವಪ್ರೇರಿತರಾದ ಎಲ್ಲರು ಜೆರುಸಲೇಮಿನಲ್ಲಿ ಸರ್ವೇಶ್ವರನಿಗೆ ಪುನಃ ಆಲಯಕಟ್ಟುವುದಕ್ಕಾಗಿ ಹೊರಟರು.


ಅರಸ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೆ ಅಸಂಖ್ಯಾತ ಕುರಿದನಗಳನ್ನು ಬಲಿದಾನ ಮಾಡಿದರು.


ನೆರೆದುಬಂದು ಸಭೆ ಸೇರಿದ್ದ ಇಸ್ರಯೇಲರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನು ಹಾಗು ದ್ರಾಕ್ಷಿ ಹಣ್ಣಿನಿಂದ ಮಾಡಿದ ಉಂಡೆಯನ್ನು ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಇನ್ನೂರು ಕುರಿಗಳಲ್ಲಿ ಇಸ್ರಯೇಲಿನ ನೀರಾವರಿಯ ಹುಲ್ಲುಗಾವಲಿನ ಒಂದು ಕುರಿ;


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ವಾರದೊಳಗೆ ಕೆಲಸ ನಡೆಯುವ ಆರು ದಿವಸಗಳಲ್ಲಿ ಒಳಗಿನ ಪ್ರಾಕಾರದ ಪೂರ್ವ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲೂ ಅಮಾವಾಸ್ಯೆಯಲ್ಲೂ ತೆರೆದಿರಬೇಕು.


ನಿಮ್ಮ ನಾಡಿನವರಲ್ಲಿ ಬೇರೆ ಯಾರಾದರು ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


‘ಆರನೆಯ ದಿನ, ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನರ್ಪಣೆಗಳ ಜೊತೆಗೆ ಕಳಂಕರಹಿತವಾದ ಎಂಟು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳನ್ನೂ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು