Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:23 - ಕನ್ನಡ ಸತ್ಯವೇದವು C.L. Bible (BSI)

23 ಹಬ್ಬದ ಏಳು ದಿನಗಳಲ್ಲಿಯೂ ಸರ್ವೇಶ್ವರನಿಗೆ ಸಮರ್ಪಿಸತಕ್ಕ ದಹನಬಲಿಗಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಕಳಂಕರಹಿತವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಒದಗಿಸಲಿ, ಮತ್ತು ದೋಷಪರಿಹಾರಕಬಲಿಗಾಗಿ ದಿನವಹಿ ಒಂದು ಹೋತವನ್ನು ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹಬ್ಬದ ಏಳು ದಿನಗಳಲ್ಲಿಯೂ ಯೆಹೋವನಿಗೆ ಸಮರ್ಪಿಸತಕ್ಕ ಸರ್ವಾಂಗಹೋಮಕ್ಕಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಪೂರ್ಣಾಂಗವಾದ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಒದಗಿಸಲಿ ಮತ್ತು ದೋಷಪರಿಹಾರಕ ಯಜ್ಞವಾಗಿ ಪ್ರತಿ ದಿನವೂ ಒಂದು ಹೋತವನ್ನು ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹಬ್ಬದ ಏಳು ದಿನಗಳಲ್ಲಿಯೂ ಯೆಹೋವನಿಗೆ ಸಮರ್ಪಿಸತಕ್ಕ ಸರ್ವಾಂಗಹೋಮಕ್ಕಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಒದಗಿಸಲಿ, ಮತ್ತು ದೋಷಪರಿಹಾರಕಯಜ್ಞಕ್ಕಾಗಿ ದಿನವಹಿ ಒಂದು ಹೋತವನ್ನು ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹಬ್ಬದ ಏಳು ದಿವಸಗಳಲ್ಲಿಯೂ ರಾಜನು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಪಾಪಪರಿಹಾರಕಯಜ್ಞಕ್ಕಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹಬ್ಬದ ಏಳು ದಿವಸಗಳಲ್ಲಿ ಪ್ರತಿದಿನವೂ ಅವನು ಯೆಹೋವ ದೇವರಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿದಿನವೂ ದೋಷಪರಿಹಾರ ಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:23
7 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.


ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನಿಗೆ ದಹನಬಲಿಗಳನ್ನು ಸಮರ್ಪಿಸಬೇಕು. ಏಳನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಅಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು.


ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು