ಯೆಹೆಜ್ಕೇಲನು 45:3 - ಕನ್ನಡ ಸತ್ಯವೇದವು C.L. Bible (BSI)3 ಮೊದಲು ಅಳೆದ ಕ್ಷೇತ್ರದಲ್ಲಿ ಹನ್ನೆರಡುವರೆ ಕಿಲೋಮೀಟರ್ ಉದ್ದದ ಐದು ಕಿಲೋಮೀಟರ್ ಅಗಲದ ಒಂದು ಭಾಗವನ್ನು ಅಳೆ; ಇದರಲ್ಲಿ ಅತಿಪರಿಶುದ್ಧವಾದ ಪವಿತ್ರಾಲಯ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮೊದಲು ಅಳೆದ ಕ್ಷೇತ್ರದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು. ಇದರಲ್ಲಿ ಪರಿಶುದ್ಧವಾದ ಪವಿತ್ರಾಯಲವು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮೊದಲು ಅಳೆದ ಕ್ಷೇತ್ರದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಹತ್ತು ಸಾವಿರ ಮೊಳ ಅಗಲದ ಒಂದು ಅಂಶವನ್ನು ಅಳೆ; ಇದರಲ್ಲಿ ಅತಿಪರಿಶುದ್ಧವಾದ ಪವಿತ್ರಾಲಯವು ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3-4 ಪವಿತ್ರವಾದ ಪ್ರದೇಶದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಸ್ಥಳವು ಯಾಜಕರಿಗೆ ಸೇರಬೇಕು. ಅವರು ಯೆಹೋವನ ಸನ್ನಿಧಿಗೆ ಹೋಗಿ ಆತನ ಪವಿತ್ರಾಲಯದಲ್ಲಿ ಆತನ ಸೇವೆ ಮಾಡುವುದರಿಂದ ಪವಿತ್ರ ಪ್ರದೇಶದ ಈ ಭಾಗವು ಅವರಿಗೋಸ್ಕರವಾಗಿಯೂ ಅವರ ಮನೆಗಳಿಗೋಸ್ಕರವಾಗಿಯೂ ಇರಬೇಕು. ಆಲಯಕ್ಕಾಗಿ ಮೀಸಲಾದ ಐನೂರು ಮೊಳ ಚೌಕವಾದ ಜಾಗವು ಈ ಪವಿತ್ರ ಪ್ರದೇಶದೊಳಗಿರಬೇಕು. ಆ ಸ್ಥಳವು ಮಹಾ ಪವಿತ್ರವಾದ ಸ್ಥಳ. ಯಾಕೆಂದರೆ ಅತ್ಯಂತ ಪವಿತ್ರವಾದ ಆಲಯವು ಅಲ್ಲಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಮತ್ತು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು. ಅಧ್ಯಾಯವನ್ನು ನೋಡಿ |