Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:5 - ಕನ್ನಡ ಸತ್ಯವೇದವು C.L. Bible (BSI)

5 ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಹನ್ನೆರಡುವರೆ ಕಿಲೋಮೀಟರ್ ಉದ್ದದ ಐದು ಕಿಲೋಮೀಟರ್ ಅಗಲದ ಕ್ಷೇತ್ರವು ಅವರಿಗೆ ಸೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಇಪ್ಪತ್ತೈದು ಸಾವಿರ ಮೊಳ ಉದ್ದವೂ ಮತ್ತು ಹತ್ತು ಸಾವಿರ ಮೊಳ ಅಗಲದ ಕ್ಷೇತ್ರವು ಅವರಿಗೆ ಸ್ವಾಸ್ತ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಇಪ್ಪತ್ತೈದು ಸಾವಿರ ಮೊಳ ಉದ್ದದ ಹತ್ತು ಸಾವಿರ ಮೊಳ ಅಗಲದ ಕ್ಷೇತ್ರವು ಅವರಿಗೆ ಸ್ವಾಸ್ತ್ಯವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪವಿತ್ರ ಪ್ರದೇಶದ ಉಳಿದರ್ಧ ಭಾಗವು ಅಂದರೆ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಜಾಗವು ಲೇವಿಯರಿಗೆ ಮೀಸಲಾಗಿದೆ. ಅವರು ವಾಸಿಸುವ ಪಟ್ಟಣವು ಈ ಪ್ರದೇಶದಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆ ಮಾಡುವ ಲೇವಿಯರಿಗೆ ತಮಗೆ ಸೊತ್ತಾಗಿ ಇಪ್ಪತ್ತು ಕೊಠಡಿಗಳಿಗಾಗಿ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:5
9 ತಿಳಿವುಗಳ ಹೋಲಿಕೆ  

ಹನ್ನೆರಡುವರೆ ಕಿಲೋಮೀಟರ್ ಉದ್ದದ, ಐದು ಕಿಲೋಮೀಟರ್ ಅಗಲದ, ಒಂದು ಪಾಲು ಯಾಜಕರ ಪಾಲಿನ ಸರಹದ್ದಿಗೆ ಪಕ್ಕದಲ್ಲಿ, ಲೇವಿಯರಿಗೆ ಸಲ್ಲತಕ್ಕ; ಈ ಎರಡು ಪಾಲುಗಳ ಒಟ್ಟಳತೆ ಎಷ್ಟೆಂದರೆ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್.


ಮೀಸಲಾದ ಪೂರ್ಣಕ್ಷೇತ್ರದ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹನ್ನೆರಡುವರೆ ಕಿಲೋಮೀಟರ್; ನೀವು ಮೀಸಲಾಗಿ ಅರ್ಪಿಸುವ ಪವಿತ್ರಕ್ಷೇತ್ರ ರಾಜಧಾನಿಗೆ ಒಳಪಟ್ಟ ಭೂಮಿ ಸಹಿತವಾಗಿ ಚಚ್ಚೌಕವಾಗಿರಬೇಕು.


ಮೀಸಲಾದ ಆ ಪವಿತ್ರಕ್ಷೇತ್ರವು ಯಾಜಕರಿಗೆ ಸಲ್ಲತಕ್ಕದ್ದು. ಉತ್ತರದಲ್ಲಿ ಅದರ ಉದ್ದವು ಹನ್ನೆರಡುವರೆ ಕಿಲೋಮೀಟರ್, ಪಶ್ಚಿಮದಲ್ಲಿ ಅಗಲವು ಐದು ಕಿಲೋಮೀಟರ್, ಪೂರ್ವದಲ್ಲಿ ಅಗಲವು ಐದು ಕಿಲೋಮೀಟರ್, ಉತ್ತರದಲ್ಲಿ ಉದ್ದವು ಹನ್ನೆರಡುವರೆ ಕಿಲೋಮೀಟರ್. ಅದರ ಮಧ್ಯೆ ಸರ್ವೇಶ್ವರನ ಪವಿತ್ರಾಲಯವಿರುವುದು.


ಅನಂತರ ಆ ಪುರುಷ ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರೆದುತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು. ಒಟ್ಟಾಗಿ ನೆಲೆಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.


ಆ ಏಳು ದಿನಗಳು ನೀವು ಪರ್ಣಕುಟೀರಗಳಲ್ಲೇ ವಾಸವಾಗಿರಬೇಕು. ಸ್ವದೇಶೀಯರಾದ ಇಸ್ರಯೇಲರೆಲ್ಲರು ಪರ್ಣಕುಟೀರಗಳಲ್ಲೇ ವಾಸವಾಗಿರಬೇಕು.


“ಇಸ್ರಯೇಲರು ತಾವು ಹೊಂದುವ ಸೊತ್ತಿನಲ್ಲಿ ಕೆಲವು ಊರುಗಳನ್ನು ಹಾಗು ಆ ಊರಿನ ಸುತ್ತಲಿನ ಭೂಮಿಯನ್ನು ಲೇವಿಯರಿಗೆ ನಿವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು