Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:8 - ಕನ್ನಡ ಸತ್ಯವೇದವು C.L. Bible (BSI)

8 ಅದು ಅವನಿಗೆ ಇಸ್ರಯೇಲಿನಲ್ಲಿ ಭೂಸೊತ್ತಾಗುವುದು; ಇನ್ನು ಮೇಲೆ ರಾಜರುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ನಾಡಿನ ಭೂಮಿಯನ್ನು ಇಸ್ರಯೇಲರಿಗೆ ಕುಲಕುಲಕ್ಕೂ ಹಂಚುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವುದು; ಇನ್ನು ಮೇಲೆ ನನ್ನ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸುವುದಿಲ್ಲ; ದೇಶದ ಭೂಮಿಯನ್ನು ಇಸ್ರಾಯೇಲರಿಗೆ ಕುಲಕ್ಕೆ ತಕ್ಕಂತೆ ಹಂಚುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವದು; ಇನ್ನು ಮೇಲೆ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ದೇಶದ ಭೂವಿುಯನ್ನು ಇಸ್ರಾಯೇಲ್ಯರಿಗೆ ಕುಲಕುಲಕ್ಕೂ ಹಂಚುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಭೂಪ್ರದೇಶದ ಈ ಭಾಗವು ಅಧಿಪತಿಗೆ ಸೇರಿದೆ. ಹೀಗೆ, ಹಿಂದಿನ ಕಾಲದ ಅಧಿಪತಿಗಳು ಮಾಡಿದಂತೆ ಈ ಅಧಿಪತಿಯು ಜನರನ್ನು ಹಿಂಸಿಸಿ ಅವರ ಭೂಮಿಯನ್ನು ಕಸಿದುಕೊಳ್ಳುವುದಿಲ್ಲ. ಉಳಿದ ಭೂಭಾಗವು ಇಸ್ರೇಲಿನ ಇತರ ಕುಲಗಳವರಿಗೆ ಯಾವಾಗಲೂ ಸೇರಿರುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸೊತ್ತಾಗಿರುವುದು. ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವ ಪಡಿಸುವುದೇ ಇಲ್ಲ. ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:8
18 ತಿಳಿವುಗಳ ಹೋಲಿಕೆ  

ಇದಲ್ಲದೆ ರಾಜನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗಬೇಕಾಗುವುದು.”


ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.


ಇಸ್ರಯೇಲಿನಲ್ಲಿ ಅಳಿದುಳಿದವರು ಅನ್ಯಾಯಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು. ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.”


ನೆಲಸಮ ಮಾಡಿತು ಪಟ್ಟಣಗಳನೆ ನಾಶಮಾಡಿತು ಕೋಟೆಕೊತ್ತಲುಗಳನೆ ನಾಡಿಗೆ ನಾಡೇ ನಡುಗಿತು ಅದರ ಗರ್ಜನೆಗೆ.


ಯುವ ಸಿಂಹವಾಯಿತು ಆಕೆ ಬೆಳೆಸಿದಾ ಮರಿಯೊಂದು, ನರಭಕ್ಷಕ ಆಗಲಾರಂಭಿಸಿತದು ಬೇಟೆಯನು ಕಲಿತು.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ವಿವೇಕಶೂನ್ಯನಾದ ಒಡೆಯ ಮಹಾಹಿಂಸಕ; ದುರ್ಲಾಭವನ್ನು ವಿರೋಧಿಸುವವನಿಗೆ ದೀರ್ಘಾಯುಷ್ಯ.


ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?


ಇಸ್ರಯೇಲರು ನಾಡನ್ನು ಎಲ್ಲೆಎಲ್ಲೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು.


ಇಗೋ, ಇಸ್ರಯೇಲಿನ ಅರಸರು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು