Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:13 - ಕನ್ನಡ ಸತ್ಯವೇದವು C.L. Bible (BSI)

13 “ನೀನು ಕಳಂಕರಹಿತವಾದ ಒಂದು ವರ್ಷದ ಕುರಿಯನ್ನು ಸರ್ವೇಶ್ವರನಿಗೆ ದಹನಬಲಿಯಾಗಿ ದಿನಂಪ್ರತಿ ಅರ್ಪಿಸಬೇಕು; ಪ್ರತಿದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ನೀನು ಪೂರ್ಣಾಂಗವಾದ ವರ್ಷದ ಕುರಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಪ್ರತಿ ದಿನ ಅರ್ಪಿಸಬೇಕು. ಪ್ರತಿ ದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ಪೂರ್ಣಾಂಗವಾದ ವರುಷದ ಕುರಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ದಿನವಹಿ ಅರ್ಪಿಸಬೇಕು; ಪ್ರತಿದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನೀನು ಪ್ರತಿದಿನ ಮುಂಜಾನೆ ಒಂದು ವರ್ಷದ ಪೂರ್ಣಾಂಗವಾದ ಕುರಿಯನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ನೀನು ಪ್ರತಿದಿನವೂ ಯೆಹೋವ ದೇವರಿಗೆ ಒಂದು ವರ್ಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ಧಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:13
11 ತಿಳಿವುಗಳ ಹೋಲಿಕೆ  

ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಪ್ರಾತಃಕಾಲದಲೆ ನಿನ್ನ ಪ್ರೀತಿಯನು I ರಾತ್ರಿಕಾಲದಲೆ ನಿನ್ನ ಸತ್ಯತೆಯನು II


ನೀವು ಸಬ್ಬತ್ ದಿನದಂದು ಹೆಚ್ಚಾಗಿ ಎರಡು ಕಳಂಕರಹಿತವಾದ ವರ್ಷದ ಕುರಿಗಳನ್ನು ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಆರು ಸೇರು ಗೋದಿಹಿಟ್ಟನ್ನು ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು.


ಗಂಡುಮಗುವನ್ನು ಹೆತ್ತರೂ ಹೆಣ್ಣುಮಗುವನ್ನು ಹೆತ್ತರೂ ಆಕೆಯ ಶುದ್ಧೀಕರಣ ದಿನಗಳು ಮುಗಿದಾಗ ಆಕೆ ದಹನಬಲಿಗಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಒಂದು ಮರಿ ಪಾರಿವಾಳವನ್ನು, ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.


ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು