Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:17 - ಕನ್ನಡ ಸತ್ಯವೇದವು C.L. Bible (BSI)

17 ಆದರೆ ರಾಜನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನಮಾಡಿದರೆ, ಬಿಡುಗಡೆಯ ವರ್ಷದವರೆಗೆ ಅದು ಅವನ ಅಧೀನವಾಗಿರುವುದು; ಆಮೇಲೆ ಅದು ಪುನಃ ರಾಜನ ವಶವಾಗುವುದು. ಆದರೆ ರಾಜನು ತನ್ನ ಮಕ್ಕಳಿಗೆ ಕೊಟ್ಟ ಸೊತ್ತು ಅವರಿಗೇ ಸೇರಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಅರಸನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನ ಮಾಡಿದರೆ, ಬಿಡುಗಡೆಯ ವರ್ಷದವರೆಗೆ ಅದು ಅವನ ಅಧೀನವಾಗಿರುವುದು; ಆ ಮೇಲೆ ಅದು ಪುನಃ ಅರಸನ ವಶವಾಗುವುದು; ಆದರೆ ಅರಸನು ತನ್ನ ಮಕ್ಕಳಿಗೆ ಕೊಟ್ಟ ಸ್ವತ್ತು ಅವರಿಗೇ ಸೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಪ್ರಭುವು ತನ್ನ ಭೂವಿುಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನಮಾಡಿದರೆ ಬಿಡುಗಡೆಯ ವರುಷದವರೆಗೆ ಅದು ಅವನ ಅಧೀನವಾಗಿರುವದು; ಆಮೇಲೆ ಅದು ಪುನಃ ಪ್ರಭುವಿನ ವಶವಾಗುವದು; ಆದರೆ ಪ್ರಭುವು ತನ್ನ ಮಕ್ಕಳಿಗೆ ಕೊಟ್ಟ ಸ್ವಾಸ್ತ್ಯವು ಅವರಿಗೇ ಸೇರಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಆ ರಾಜನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ದಾಸನಿಗೆ ಉಚಿತವಾಗಿ ಕೊಟ್ಟರೆ, ಆ ಭೂಮಿಯು ಬಿಡುಗಡೆ ಸಂವತ್ಸರದ ತನಕ ಮಾತ್ರವೇ ದಾಸನದ್ದಾಗಿರುವದು. ಅನಂತರ ಅದು ರಾಜನಿಗೆ ಹಿಂದೆ ಹೋಗುವದು. ರಾಜನ ಗಂಡುಮಕ್ಕಳು ಮಾತ್ರ ರಾಜನಿಂದ ಹೊಂದಿದ ಭೂಮಿಯನ್ನು ನಿತ್ಯಕಾಲಕ್ಕೂ ಅನುಭೋಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಆತನು ತನ್ನ ಸೊತ್ತಿನೊಳಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರ್ಷದವರೆಗೂ ಅವನಿಗಾಗಿದ್ದು ಆಮೇಲೆ ಮತ್ತೆ ರಾಜಕುಮಾರನಿಗೆ ಸೇರಬೇಕು. ಅವನ ಸೊತ್ತು ಅವನ ಮಕ್ಕಳಿಗೆ ಮಾತ್ರ ಸೇರಬೇಕು. ಇದು ಅವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:17
5 ತಿಳಿವುಗಳ ಹೋಲಿಕೆ  

ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು.


ಇದಲ್ಲದೆ ರಾಜನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗಬೇಕಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು