Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:18 - ಕನ್ನಡ ಸತ್ಯವೇದವು C.L. Bible (BSI)

18 ಇದಲ್ಲದೆ ರಾಜನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗಬೇಕಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ ಅರಸನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ. ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ ಪ್ರಭುವು ಪ್ರಜೆಗಳ ಪಿತ್ರಾರ್ಜಿತ ಭೂವಿುಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು; ಸ್ವಂತ ಭೂವಿುಯನ್ನೇ ಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳಕೊಂಡು ದಿಕ್ಕಾಪಾಲಾಗಿ ಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ರಾಜನು ತನ್ನ ಪ್ರಜೆಯ ಭೂಮಿಯನ್ನು ತನ್ನ ಉಪಯೋಗಕ್ಕೆಂದು ಬಲತ್ಕಾರದಿಂದ ಇಟ್ಟುಕೊಳ್ಳಬಾರದು ಅಥವಾ ತೆಗೆದುಕೊಳ್ಳಲೂಬಾರದು. ತನ್ನ ಸ್ವಂತ ಭೂಮಿಯಿಂದ ಪಾಲನ್ನು ತನ್ನ ಮಕ್ಕಳಿಗೆ ಕೊಡಬೇಕು. ಹೀಗೆ ನನ್ನ ಜನರು ತಮ್ಮ ಭೂಮಿಯನ್ನು ಕಳೆದುಕೊಳ್ಳುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಾದ ಮೇಲೆ ರಾಜಕುಮಾರನು ಜನರ ಸೊತ್ತನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆಯೊಳಗಿಂದ ಅವರನ್ನು ತಳ್ಳಬಾರದು. ನನ್ನ ಜನರು ತಮ್ಮ ತಮ್ಮ ಬಾಧ್ಯತೆಯನ್ನು ಕಳೆದುಕೊಳ್ಳಬಾರದು. ತಂದೆಯು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಪುತ್ರರಿಗೆ ಸೊತ್ತನ್ನು ಕೊಡಬೇಕು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:18
18 ತಿಳಿವುಗಳ ಹೋಲಿಕೆ  

ಅದು ಅವನಿಗೆ ಇಸ್ರಯೇಲಿನಲ್ಲಿ ಭೂಸೊತ್ತಾಗುವುದು; ಇನ್ನು ಮೇಲೆ ರಾಜರುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ನಾಡಿನ ಭೂಮಿಯನ್ನು ಇಸ್ರಯೇಲರಿಗೆ ಕುಲಕುಲಕ್ಕೂ ಹಂಚುವರು.


ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”


ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: “ಆತನು ಉನ್ನತಿಗೇರಿದನು ಶತ್ರುಗಳನು ಸೆರೆಯಾಳಾಗಿ ಕೊಂಡೊಯ್ದನು ನರಮಾನವರಿಗಿತ್ತನು ವರದಾನಗಳನು.”


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು,


ಟಗರು ಹೋತಗಳೇ, ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿಬಿಟ್ಟಿರಿ;


ದಾವೀದನು ಪೋಷಿಸಿದನವರನು ನೇರ ಮನದಿಂದ I ಪರಿಪಾಲಿಸಿದನವರನು ರಾಜ್ಯಾಧಿಕಾರ ಕುಶಲತೆಯಿಂದ II


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ನಿಮ್ಮ ಉತ್ತಮವಾದ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಎಣ್ಣೆ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.


ಅದಕ್ಕೆ ನಾಬೋತನು, “ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು