ಯೆಹೆಜ್ಕೇಲನು 46:20 - ಕನ್ನಡ ಸತ್ಯವೇದವು C.L. Bible (BSI)20 ಆಗ ಅವನು ನನಗೆ, “ಯಾಜಕರು ಹವಿಸ್ಸನ್ನು ಹೊರಗಣ ಪ್ರಾಕಾರಕ್ಕೆ ಒಯ್ದು ಜನರನ್ನು ಶುದ್ಧಿಮಾಡದ ಹಾಗೆ, ಪ್ರಾಯಶ್ಚಿತ್ತ ಬಲಿಪಶುವಿನ ಮತ್ತು ದೋಷಪರಿಹಾರಕ ಬಲಿಪಶುವಿನ ಮಾಂಸವನ್ನು ಬೇಯಿಸುವುದಕ್ಕೂ ಧಾನ್ಯನೈವೇದ್ಯವನ್ನು ಪಕ್ವಮಾಡುವುದಕ್ಕೂ ಈ ಸ್ಥಳ ಏರ್ಪಟ್ಟಿದೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಗ ಅವನು ನನಗೆ - ಯಾಜಕರು ಹವಿಸ್ಸನ್ನು ಹೊರಗಣ ಪ್ರಾಕಾರಕ್ಕೆ ಒಯ್ದು ಜನರನ್ನು ಶುದ್ಧಿಮಾಡದ ಹಾಗೆ ಪ್ರಾಯಶ್ಚಿತ್ತಯಜ್ಞಪಶುವಿನ ಮತ್ತು ದೋಷಪರಿಹಾರಕಯಜ್ಞಪಶುವಿನ ಮಾಂಸವನ್ನು ಬೇಯಿಸುವದಕ್ಕೂ ಧಾನ್ಯನೈವೇದ್ಯವನ್ನು ಪಕ್ವಮಾಡುವದಕ್ಕೂ ಈ ಸ್ಥಳವು ಏರ್ಪಟ್ಟಿದೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪಪರಿಹಾರಕಯಜ್ಞದ ಮಾಂಸಗಳನ್ನು ಬೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನ್ನು ಸುಡುವರು. ಇದನ್ನು ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನ್ನು ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನ್ನು ತರಬಾರದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಬೇಯಿಸಿದ ಧಾನ್ಯ ಸಮರ್ಪಣೆಯನ್ನು ಸುಡುವಂತೆ ಏರ್ಪಡಿಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡುವುದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |