Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:6 - ಕನ್ನಡ ಸತ್ಯವೇದವು C.L. Bible (BSI)

6 ಅಮಾವಾಸ್ಯೆಯಲ್ಲಿ ಅವನು ಕಳಂಕರಹಿತವಾದ ಒಂದು ಹೋರಿಯನ್ನೂ ಆಡುಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅವು ಕಳಂಕರಹಿತವಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ, ಆರು ಕುರಿಗಳನ್ನೂ, ಒಂದು ಟಗರನ್ನೂ ಒಪ್ಪಿಸತಕ್ಕದ್ದು. ಅವು ಪೂರ್ಣಾಂಗವಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ ಆರು ಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅದು ಪೂರ್ಣಾಂಗವಾಗಿಯೇ ಇರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಅಮಾವಾಸ್ಯೆ ದಿವಸ ಅವನು ಒಂದು ಎಳೇ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಅದರ ಜೊತೆಗೆ ಆರು ಪೂರ್ಣಾಂಗವಾದ ಕುರಿಗಳನ್ನೂ ಒಂದು ಪೂರ್ಣಾಂಗವಾದ ಟಗರನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗವಾದ ಒಂದು ಎಳೆಯ ಹೋರಿ, ಆರು ಕುರಿಮರಿಗಳು, ಒಂದು ಟಗರನ್ನು ಅರ್ಪಿಸಬೇಕು. ಇವು ದೋಷವಿಲ್ಲದ್ದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:6
3 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ವಾರದೊಳಗೆ ಕೆಲಸ ನಡೆಯುವ ಆರು ದಿವಸಗಳಲ್ಲಿ ಒಳಗಿನ ಪ್ರಾಕಾರದ ಪೂರ್ವ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲೂ ಅಮಾವಾಸ್ಯೆಯಲ್ಲೂ ತೆರೆದಿರಬೇಕು.


‘ಅಮಾವಾಸ್ಯೆಯಲ್ಲಿ ದಹನಬಲಿಗಾಗಿ ಕಳಂಕರಹಿತವಾದ ಟಗರು, ವರ್ಷದ ಎರಡು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳು - ಇವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.


ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು