Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:1 - ಕನ್ನಡ ಸತ್ಯವೇದವು C.L. Bible (BSI)

1 ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದುತಂದನು; ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರತಂದನು; ಆಹಾ, ದೇವಸ್ಥಾನದ ಹೊಸ್ತಲ ಕೆಳಗಿನಿಂದ ನೀರು ಹೊರಟು ಮೂಡಲಿಗೆ ಹರಿಯುತ್ತಿತ್ತು (ದೇವಸ್ಥಾನವು ಪೂರ್ವಾಭಿಮುಖವಷ್ಟೆ); ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅವನು ಆಲಯದ ಪ್ರವೇಶ ದ್ವಾರಕ್ಕೆ ನನ್ನನ್ನು ಕರೆದುಕೊಂಡು ಹೋದನು. ನಾನು ಅಲ್ಲಿ ಆಲಯದ ಪೂರ್ವ ದ್ವಾರದ ಕೆಳಗಡೆಯಿಂದ ಹರಿಯುವ ನೀರನ್ನು ಕಂಡೆನು. ಆಲಯದ ಮುಂಭಾಗ ಪೂರ್ವ ದಿಕ್ಕಿನಲ್ಲಿದೆ. ಆ ನೀರು ಆಲಯದ ದಕ್ಷಿಣದ ಭಾಗದ ಕೆಳಗಿನಿಂದ ಹರಿಯುತ್ತಾ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ಮನುಷ್ಯನು ನನ್ನನ್ನು ಮತ್ತೆ ಆಲಯದ ಬಾಗಿಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು, ಏಕೆಂದರೆ ಆಲಯದ ಮುಂಭಾಗದಲ್ಲಿ ನೀರು ಇತ್ತು. ಆ ನೀರು ಆಲಯದ ದಕ್ಷಿಣಕ್ಕೆ ಕೆಳಗಡೆ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:1
20 ತಿಳಿವುಗಳ ಹೋಲಿಕೆ  

ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಆ ದಿನ ಬಂದಾಗ ಜೀವಜಲವು ಜೆರುಸಲೇಮಿನಿಂದ ಹರಿಯುವುದು. ಅದರ ಅರ್ಧಭಾಗ ಪೂರ್ವದ ಸಮುದ್ರಕ್ಕೂ ಇನ್ನರ್ಧಭಾಗ ಪಶ್ಚಿಮದ ಸಮುದ್ರಕ್ಕೂ ಹರಿಯುವುದು. ಮಳೆ, ಬೇಸಿಗೆ ಎನ್ನದೆ ಪ್ರವಾಹ ಹರಿಯುತ್ತಲೇ ಇರುವುದು.


ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.


ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.


“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


ನದಿಯೊಂದು ಆನಂದಗೊಳಿಸುವುದು ದೇವನಗರವನು I ಪುನೀತಗೊಳಿಸುವುದು ಪರಾತ್ಪರನ ನಿವಾಸವನು II


ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.


ದ್ವಾರದ ಅಗಲ ಐದು ಮೀಟರು ದ್ವಾರದ ಎರಡು ಪಕ್ಕದ ಗೋಡೆಗಳ ಅಗಲ ಎರಡುವರೆ ಎರಡುವರೆ ಮೀಟರ್, ಪರಿಶುದ್ಧ ಸ್ಥಳದ ಉದ್ದ ಇಪ್ಪತ್ತು ಮೀಟರ್, ಅಗಲ ಹತ್ತು ಮೀಟರ್ ಇದ್ದವು.


ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಆಗ ಅವನು ನನಗೆ, “ಇವು ದೇವಾಲಯದ ಸೇವಕರು ಬಲಿಪ್ರಾಣಿಗಳನ್ನು ತಂದ ಜನರಿಗಾಗಿ ಅವುಗಳ ಮಾಂಸವನ್ನು ಬೇಯಿಸುವ ಪಾಕಶಾಲೆಗಳು,” ಎಂದು ಹೇಳಿದನು.


ಆಗ ಅವನು ನನ್ನನ್ನು ಉತ್ತರ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಸಿಕೊಂಡು ಪೂರ್ವದ ಹೆಬ್ಬಾಗಿಲಿಗೆ ಕರೆದುತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು.


ಅವರ ಪಾದಗಳು ಜೆರುಸಲೇಮಿಗೆ ಪೂರ್ವಕ್ಕಿರುವ ಓಲಿವ್ ಗುಡ್ಡದ ಮೇಲೆ ನಿಲ್ಲುವುದು. ಆ ಗುಡ್ಡವು ಇಬ್ಭಾಗವಾಗಿ ಪೂರ್ವಪಶ್ಚಿಮದ ಉದ್ದಕ್ಕೂ ಇನ್ನರ್ಧ ಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.


ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ I ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ II


ಗಾಯಕ ನರ್ತಕರೂ ಹಾಡುವರೀ ಹಾಡ I “ನಮ್ಮೆಲ್ಲರ ಜೀವದೊರೆತೆ ನೀನೇ ನೋಡ” II


ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು ಮೆಟ್ಟಲುಗಳನ್ನು ಹತ್ತಿ ಹೊಸ್ತಿಲಿನ ಅಗಲವನ್ನು ಅಳೆದನು. ಒಂದೊಂದು ಹೊಸ್ತಿಲಿನ ಅಗಲವು ಮೂರು ಮೀಟರ್ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು