Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:14 - ಕನ್ನಡ ಸತ್ಯವೇದವು C.L. Bible (BSI)

14 ನಾನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ವಾಗ್ದಾನಮಾಡಿದ ಈ ನಾಡನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸಿರಿ; ಇದು ನಿಮಗೆ ಸೊತ್ತಾಗಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ನಿಮ್ಮ ಪೂರ್ವಿಕರಿಗೆ ಪ್ರಮಾಣವಾಗಿ ವಾಗ್ದಾನ ಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ. ಇದು ನಿಮಗೆ ಸ್ವತ್ತಾಗಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ವಾಗ್ದಾನಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ; ಇದು ನಿಮಗೆ ಸ್ವಾಸ್ತ್ಯವಾಗಿಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ದೇಶವನ್ನು ಸಮಾನವಾಗಿ ಪಾಲು ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಈ ದೇಶವನ್ನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದೆನು. ಈಗ ನಾನು ಇದನ್ನು ನಿಮಗೆ ಕೊಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು. ಏಕೆಂದರೆ ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈಯೆತ್ತಿ ಪ್ರಮಾಣ ಮಾಡಿದ್ದೇನೆ. ಈ ದೇಶವು ನಿಮಗೆ ಬಾಧ್ಯವಾಗಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:14
16 ತಿಳಿವುಗಳ ಹೋಲಿಕೆ  

ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ನೀವು ಇಸ್ರಯೇಲಿನ ಕುಲಗಳಿಗೆ ಸೊತ್ತಾಗಿ ಹಂಚಿಕೊಡಬೇಕಾದ ನಾಡು ಇದೇ; ಕುಲಗಳ ಪಾಲುಗಳೂ ಇವೇ; ಇದು ಸರ್ವೇಶ್ವರನಾದ ದೇವರ ನುಡಿ.


ನಾನು ಪ್ರಮಾಣಮಾಡಿ ನಿಮ್ಮ ಪಿತೃಗಳಿಗೆ ಯಾವ ನಾಡನ್ನು ಕೊಟ್ಟೆನೋ ಆ ಇಸ್ರಾಯೇಲ್ ನಾಡಿಗೆ ನಿಮ್ಮನ್ನು ಬರಮಾಡುವಾಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.


ಅದೃಷ್ಟದ ಚೀಟನ್ನು ಕುಲುಕಿ ಮಡಲಿಗೆ ಹಾಕಬಹುದು; ಆದರೆ ತೀರ್ಪು ಸರ್ವೇಶ್ವರನ ಕೈಯಲ್ಲಿರುವುದು.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.


‘ಸರ್ವೇಶ್ವರ ಪ್ರಮಾಣ ಪೂರ್ವಕವಾಗಿ ವಾಗ್ದಾನ ಮಾಡಿದ ನಾಡಿಗೆ ತನ್ನ ಜನರನ್ನು ಸೇರಿಸಲು ಶಕ್ತಿ ಸಾಲದೆ ಹೋಯಿತು; ಅವರನ್ನು ಮರುಭೂಮಿಯಲ್ಲೇ ಕೊಂದುಹಾಕಿಬಿಟ್ಟ’ ಎಂದುಕೊಳ್ಳುವರು.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”


ಸವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: “ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ,” ಎಂದರು.


ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.


ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಯೇಲರೇ, ನಿನ್ನಲ್ಲಿ ಸಂಚರಿಸುತ್ತಾ, ನಿನ್ನನ್ನು ಸೊತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರಶೋಕವನ್ನು ಕೊಡದಿರುವೆ.”


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು