Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ಅವನು ನನ್ನನ್ನು ಉತ್ತರ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಸಿಕೊಂಡು ಪೂರ್ವದ ಹೆಬ್ಬಾಗಿಲಿಗೆ ಕರೆದುತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅವನು ನನ್ನನ್ನು ಉತ್ತರದಿಕ್ಕಿನ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಕೊಂಡು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಕರೆದು ತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲನೆ ಹರಿಯುವ ನೀರು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಅವನು ನನ್ನನ್ನು ಬಡಗಣ ಹೆಬ್ಬಾಗಿಲಿಂದ ದೇವಾಲಯದ ಹೊರಗಣ ಮಾರ್ಗವಾಗಿ ಸುತ್ತಿಸಿಕೊಂಡು ಮೂಡಲ ಹೆಬ್ಬಾಗಿಲಿಗೆ ಕರತಂದನು; ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ನನ್ನನ್ನು ಉತ್ತರದ ದ್ವಾರದಿಂದ ಹೊರಕ್ಕೆ ತಂದು, ದೇವಾಲಯದ ಹೊರ ಅಂಚಿನಲ್ಲಿಯೇ ಪೂರ್ವ ದ್ವಾರಕ್ಕೆ ತಂದನು. ಆ ದ್ವಾರದ ದಕ್ಷಿಣದ ಕಡೆಯಿಂದ ನೀರು ಹರಿದು ಬರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಮೇಲೆ ಅವನು ನನ್ನನ್ನು ಬಾಗಿಲಿನ ಮಾರ್ಗವಾಗಿ ಉತ್ತರದ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಿಲಿನವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಮತ್ತು ದಕ್ಷಿಣ ಭಾಗದಿಂದ ನೀರು ಜಿನುಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:2
5 ತಿಳಿವುಗಳ ಹೋಲಿಕೆ  

ಬಳಿಕ ಆ ಪುರಷನು ಉತ್ತರ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರೆದುತಂದನು; ಏನಾಶ್ಚರ್ಯ! ನಾನು ನೋಡುತ್ತಿದ್ದಂತೆ ಸರ್ವೇಶ್ವರನ ತೇಜಸ್ಸು ದೇವಾಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆ.


ಆಗ ಸರ್ವೇಶ್ವರ ನನಗೆ, “ಈ ಬಾಗಿಲು ಮುಚ್ಚಿರಬೇಕು, ಇದನ್ನು ತೆರೆಯಕೂಡದು. ಇದರಿಂದ ಯಾರೂ ಪ್ರವೇಶಿಸದಿರಲಿ; ಇಸ್ರಯೇಲಿನ ದೇವರಾದ ಸರ್ವೇಶ್ವರ ಇದರಿಂದ ಪ್ರವೇಶಿಸಿದ್ದಾರೆ; ಇದು ಮುಚ್ಚೇ ಇರಬೇಕು.


ಆಮೇಲೆ ಅವನು ನನ್ನನ್ನು ಉತ್ತರ ಬಾಗಿಲಿಗೆ ಕರೆದುತಂದು ಅದನ್ನೂ ಅದರ ಗೋಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಅಲ್ಲಿಯೂ ಆ ಅಳತೆಗಳೇ ಕಂಡುಬಂದವು;


ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದುತಂದನು; ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು.


ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವದಂಡೆಗೆ ಮುಂದುವರಿದು ಐನೂರು ಮೀಟರ್ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಹೆಜ್ಜೆ ಮುಳುಗುವಷ್ಟಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು