ಯೆಹೆಜ್ಕೇಲನು 47:3 - ಕನ್ನಡ ಸತ್ಯವೇದವು C.L. Bible (BSI)3 ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವದಂಡೆಗೆ ಮುಂದುವರಿದು ಐನೂರು ಮೀಟರ್ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಹೆಜ್ಜೆ ಮುಳುಗುವಷ್ಟಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವಕ್ಕೆ ಮುಂದುವರಿದು ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸಿದನು. ಅಲ್ಲಿ ನೀರು ಕಾಲು ಮುಳುಗುವಷ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಮೂಡಲಿಗೆ ಮುಂದರಿದು ಸಾವಿರ ಮೊಳ ಅಳೆದು ನನ್ನನ್ನು ನೀರಿನ ಆಚೆಗೆ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವನು ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡು ಪೂರ್ವದ ಕಡೆಗೆ ನಡೆದನು. ಅವನು ಸಾವಿರ ಮೊಳ ಅಳೆದನು. ನನ್ನನ್ನು ಆ ಸ್ಥಳದಲ್ಲಿ ನೀರಿನಲ್ಲಿ ನಡೆದುಕೊಂಡು ಬರುವಂತೆ ಹೇಳಿದನು. ನೀರು ನನ್ನ ಪಾದ ಮುಳುಗುವಷ್ಟು ಆಳವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಕೈಯಲ್ಲಿ ಅಳತೆಮಾಡುವ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು. ಅಲ್ಲಿ ನೀರು ಪಾದ ಮುಳುಗುವಷ್ಟಿತ್ತು. ಅಧ್ಯಾಯವನ್ನು ನೋಡಿ |