Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:4 - ಕನ್ನಡ ಸತ್ಯವೇದವು C.L. Bible (BSI)

4 ಅವನು ಪುನಃ ಐನೂರು ಮೀಟರ್ ಅಳೆದು ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಮತ್ತೆ ಐನೂರು ಮೀಟರ್ ಅಳೆದು ನನ್ನನ್ನು ನೀರಿನ ಆಚೆ ದಾಟಿಸುವಾಗ ಆ ನೀರು ಸೊಂಟದವರೆಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಸೊಂಟದವರೆಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಪುನಃ ಸಾವಿರ ಮೊಳ ಅಳೆದು ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಪುನಃ ಸಾವಿರ ಮೊಳ ಅಳೆದು ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ನೀರು ಸೊಂಟದವರೆಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವನು ತಿರುಗಿ ಸಾವಿರ ಮೊಳ ಅಳೆದನು. ಆ ಜಾಗದಲ್ಲಿದ್ದ ನೀರಿನಲ್ಲಿ ನನಗೆ ನಡೆಯಲು ಹೇಳಿದನು. ಅಲ್ಲಿ ನೀರು ನನ್ನ ಮೊಣಕಾಲಿನಷ್ಟು ಆಳವಿತ್ತು. ತಿರುಗಿ ಅವನು ಸಾವಿರ ಮೊಳದಷ್ಟು ದೂರ ಅಳತೆ ಮಾಡಿದನು. ಆ ಸ್ಥಳದಲ್ಲಿ ನೀರಿನಲ್ಲಿ ನಡೆಯಲು ಹೇಳಿದನು. ಅಲ್ಲಿ ನೀರು ನನ್ನ ಸೊಂಟದಷ್ಟು ಆಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಸಾವಿರಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:4
5 ತಿಳಿವುಗಳ ಹೋಲಿಕೆ  

ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವದಂಡೆಗೆ ಮುಂದುವರಿದು ಐನೂರು ಮೀಟರ್ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಹೆಜ್ಜೆ ಮುಳುಗುವಷ್ಟಿತ್ತು.


ಅವನು ಮತ್ತೆ ಅಳೆದು ಐನೂರು ಮೀಟರ್ ಅಳೆದಾಗ ಅದು ನನ್ನಿಂದ ದಾಟಲಾಗದ ತೊರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು. ದಾಟಲಾಗದ ತೊರೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು