Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:5 - ಕನ್ನಡ ಸತ್ಯವೇದವು C.L. Bible (BSI)

5 ಅವನು ಮತ್ತೆ ಅಳೆದು ಐನೂರು ಮೀಟರ್ ಅಳೆದಾಗ ಅದು ನನ್ನಿಂದ ದಾಟಲಾಗದ ತೊರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು. ದಾಟಲಾಗದ ತೊರೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಮತ್ತೆ ಸಾವಿರ ಮೊಳ ಅಳೆದನು. ಅದು ನನ್ನಿಂದ ದಾಟಲಾಗದ ನದಿಯಾಗಿತ್ತು; ನೀರು ಆಳವಾಗಿ ಈಜಾಡುವಷ್ಟು ಪ್ರವಾಹವಾಗಿತ್ತು, ದಾಟಲಾಗದ ನದಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಮತ್ತೆ ಸಾವಿರ ಮೊಳ ಅಳೆದನು; ಅದು ನನ್ನಿಂದ ದಾಟಲಾಗದ ತೊರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು; ದಾಟಲಾಗದ ತೊರೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು ಇನ್ನೂ ಒಂದು ಸಾವಿರ ಮೊಳ ದೂರ ಅಳೆದನು. ಅಲ್ಲಿ ನೀರು ಹೆಚ್ಚಿದ್ದು ನನ್ನಿಂದ ದಾಟಲು ಆಗದಷ್ಟು ಆಳವಿತ್ತು. ಅದು ನದಿಯಾಗಿತ್ತು. ಆ ನೀರಿನಲ್ಲಿ ಈಜಾಡಬಹುದಾಗಿತ್ತು. ದಾಟಲಾಗದ ಆಳವಾದ ಹೊಳೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂಥ ನದಿಯಾಗಿತ್ತು. ಏಕೆಂದರೆ ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:5
8 ತಿಳಿವುಗಳ ಹೋಲಿಕೆ  

ಸಮುದ್ರವು ನೀರಿನಿಂದ ತುಂಬಿ ಇರುವಂತೆ ಜಗವು ಸರ್ವೇಶ್ವರಸ್ವಾಮಿಯ ಮಹಿಮೆಯ ಜ್ಞಾನದಿಂದ ತುಂಬಿರುವುದು.


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಅವನು ಪುನಃ ಐನೂರು ಮೀಟರ್ ಅಳೆದು ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಮತ್ತೆ ಐನೂರು ಮೀಟರ್ ಅಳೆದು ನನ್ನನ್ನು ನೀರಿನ ಆಚೆ ದಾಟಿಸುವಾಗ ಆ ನೀರು ಸೊಂಟದವರೆಗೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು