Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:7 - ಕನ್ನಡ ಸತ್ಯವೇದವು C.L. Bible (BSI)

7 ನಾನು ಹಿಂದಿರುಗಲು, ಇಗೋ, ತೊರೆಯ ಎರಡು ದಡಗಳಲ್ಲಿಯೂ ಅನೇಕಾನೇಕ ವೃಕ್ಷಗಳು ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಹಿಂದಿರುಗಲು ಆಹಾ, ನದಿಯ ಎರಡು ದಡಗಳಲ್ಲಿಯೂ ಅನೇಕ ವೃಕ್ಷಗಳು ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಹಿಂದಿರುಗಲು ಆಹಾ, ತೊರೆಯ ಎರಡು ದಡಗಳಲ್ಲಿಯೂ ಅನೇಕಾನೇಕ ವೃಕ್ಷಗಳು ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ನದಿಯ ತೀರದಲ್ಲಿ ನಡೆಯುತ್ತಿರುವಾಗ ಅದರ ಎರಡೂ ಕಡೆಗಳಲ್ಲಿ ಲೆಕ್ಕವಿಲ್ಲದಷ್ಟು ಮರಗಳನ್ನು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ತಿರುಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆ ಕಡೆಯೂ ಈ ಕಡೆಯೂ ಅತಿ ಹೆಚ್ಚು ಮರಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:7
9 ತಿಳಿವುಗಳ ಹೋಲಿಕೆ  

ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”


ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು.


ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಜೋರ್ಡನ್ ನದೀತೀರಕ್ಕೆ ಬಂದನು.


ಎದೋಮ್ ದೇಶದಲ್ಲಿ ಎಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಅರಸ ಸೊಲೊಮೋನನು ಹಡಗುಗಳನ್ನು ಕಟ್ಟಿಸಿದನು.


ಮೋಶೆ ಸರ್ವೇಶ್ವರ ಸ್ವಾಮಿಯನ್ನು ಪ್ರಾರ್ಥಿಸಿದನು. ಆಗ ಸರ್ವೇಶ್ವರ ಅವನಿಗೆ ಒಂದು ಗಿಡವನ್ನು ತೋರಿಸಿದರು. ಅದನ್ನು ಆ ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಯಿತು.


ಬರುವುದು ನಿನ್ನಲ್ಲಿಗೆ ಲೆಬನೋನಿನ ವೈಭವವು ಅದರ ತುರಾಯಿ, ಅಗಸೆ, ತಿಲಕ ಈ ಮರಗಳಾವುವು. ಅಲಂಕರಿಸುವುವು ನನ್ನ ಪವಿತ್ರಾಲಯವನು ಮಹಿಮೆಪಡಿಸುವೆನು ನನ್ನ ಪಾದಪೀಠದ ಮಂದಿರವನು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು