ಯೆಹೆಜ್ಕೇಲನು 47:9 - ಕನ್ನಡ ಸತ್ಯವೇದವು C.L. Bible (BSI)9 ಈ ತೊರೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪುಗುಂಪಾಗಿ ಚಲಿಸುವ ಸಕಲವಿಧ ಜಲಜಂತುಗಳು ಬದುಕಿ ಬಾಳುವುವು; ಮೀನುಗಳು ತಂಡೋಪ ತಂಡವಾಗಿರುವುವು. ಈ ನೀರು ಸಮುದ್ರಕ್ಕೆ ಬೀಳಲು ಆ ನೀರೂ ಸಿಹಿಯಾಗುವುದು; ಈ ತೊರೆ ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈ ನದಿಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲ ವಿಧವಾದ ಜಲಜಂತುಗಳು ಬದುಕಿ ಬಾಳುವವು; ಮೀನುಗಳು ಗುಂಪು ಗುಂಪಾಗಿರುವವು. ಈ ನೀರು ಸಮುದ್ರಕ್ಕೆ ಬೀಳಲು, ಆ ನೀರೂ ಸಿಹಿಯಾಗುವುದು. ಈ ನದಿಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈ ತೊರೆಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪುಗುಂಪಾಗಿ ಚಲಿಸುವ ಸಕಲವಿಧ ಜಲಜಂತುಗಳು ಬದುಕಿಬಾಳುವವು; ಮೀನುಗಳು ತಂಡೋಪತಂಡವಾಗಿರುವವು. ಈ ನೀರು ಸಮುದ್ರಕ್ಕೆ ಬೀಳಲು [ಆ ನೀರೂ] ಸಿಹಿಯಾಗುವದು; ಈ ತೊರೆಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇದು ಮೃತ್ಯುಸಮುದ್ರವನ್ನು ಸೇರಿದಾಗ ಅದರ ನೀರು ಹೊಸದಾಗಿ ಶುದ್ಧವಾಗುವದು. ನೀರಿನಲ್ಲಿ ನಾನಾ ತರದ ಮೀನುಗಳು ಜೀವಿಸುವವು, ಮತ್ತು ಆ ಹೊಳೆಯು ಹರಿಯುವಲ್ಲೆಲ್ಲಾ ವಿವಿಧ ಜಾತಿಯ ಪ್ರಾಣಿಗಳು ವಾಸಿಸುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂಥ ಸಮಸ್ತ ಜೀವಿಗಳು ಬದುಕುವುವು ಮತ್ತು ಮೀನುಗಳ ಬಹುದೊಡ್ಡ ಸಮೂಹವಾಗುವುವು. ಏಕೆಂದರೆ ಈ ನೀರು ಅಲ್ಲಿಗೆ ಬರುವಾಗ ಅವು ಶುದ್ಧವಾಗುವುವು. ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವುವು. ಅಧ್ಯಾಯವನ್ನು ನೋಡಿ |
ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.