ಯೆಹೆಜ್ಕೇಲನು 48:11 - ಕನ್ನಡ ಸತ್ಯವೇದವು C.L. Bible (BSI)11 ಆ ಕ್ಷೇತ್ರ ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರು ಹಾಗು ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರು ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ, ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು; ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈ ಭೂಮಿಯು ಚಾದೋಕನ ಸಂತತಿಯವರಿಗಿರುವದು. ಆ ಜನರು ನನ್ನ ಪರಿಶುದ್ಧ ಯಾಜಕರಾಗಿ ಆರಿಸಲ್ಪಟ್ಟಿರುತ್ತಾರೆ. ಯಾಕೆಂದರೆ ಇಸ್ರೇಲಿನ ಇತರ ಜನರು ನನ್ನನ್ನು ಬಿಟ್ಟು ತೊಲಗಿದರೂ ಇವರು ನನಗೆ ಸೇವೆಮಾಡುವದನ್ನು ಮುಂದುವರಿಸುತ್ತಿದ್ದರು. ಲೇವಿಕುಲದ ಜನರಂತೆ ಚಾದೋಕನ ಸಂತತಿಯವರು ನನ್ನನ್ನು ಬಿಟ್ಟುಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದು ನನಗೆ ನಂಬಿಗಸ್ತರಾಗಿ ನಡೆದುಕೊಂಡ ಚಾದೋಕನ ಪುತ್ರರಲ್ಲಿ ಪ್ರತಿಷ್ಠಿತರಾಗಿರುವ ಯಾಜಕರದಾಗಿರಬೇಕು; ಇಸ್ರಾಯೇಲರು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ಚಾದೋಕಿನವರು ತಪ್ಪಿಹೋಗಲಿಲ್ಲ. ಅಧ್ಯಾಯವನ್ನು ನೋಡಿ |