Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:14 - ಕನ್ನಡ ಸತ್ಯವೇದವು C.L. Bible (BSI)

14 ಆ ಕ್ಷೇತ್ರ ಸರ್ವೇಶ್ವರನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು, ಅದಲುಬದಲು ಮಾಡಕೂಡದು. ನಾಡಿನ ಆ ಶ್ರೇಷ್ಠಾಂಶ ಪರರವಶವಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಕ್ಷೇತ್ರವು ಯೆಹೋವನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು ಮತ್ತು ಬದಲಾಯಿಸಲೂಬಾರದು. ದೇಶದ ಆ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವನಿಗೆ ಪರಿಶುದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಕ್ಷೇತ್ರವು ಯೆಹೋವನಿಗೆ ಮೀಸಲಾದದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು, ಬದಲಾಬದಲಿ ಮಾಡಕೂಡದು, ದೇಶದ ಆ ಶ್ರೇಷ್ಠಾಂಶವು ಪರವಶವಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಪ್ರದೇಶವನ್ನು ಲೇವಿಯರು ಮಾರಕೂಡದು, ಬದಲಾಯಿಸಕೂಡದು ಮತ್ತು ವಿಭಜಿಸಕೂಡದು. ಈ ಪ್ರದೇಶವು ಯೆಹೋವನಿಗೆ ಮೀಸಲಾಗಿರುವುದರಿಂದ ಅದು ಬಹಳ ವಿಶೇಷವಾಗಿದೆ ಅಲ್ಲದೆ ದೇಶದ ಅತ್ಯುತ್ತಮ ಭಾಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಅದರಲ್ಲಿ ಏನನ್ನೂ ಮಾರಬಾರದು, ಏನನ್ನೂ ಬದಲಾಯಿಸಬಾರದು. ದೇಶದ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವ ದೇವರಿಗೆ ಪರಿಶುದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:14
12 ತಿಳಿವುಗಳ ಹೋಲಿಕೆ  

“ಯಾರಾದರು ನರಮಾನವನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ, ಬೇರೆ ಯಾವುದನ್ನೇ ಆಗಲಿ ಯಾವ ಶರತ್ತೂ ಇಲ್ಲದೆ ಸಂಪೂರ್ಣವಾಗಿ ಸರ್ವೇಶ್ವರನದಾಗಿರಲು ಹರಕೆ ಮಾಡಿಕೊಟ್ಟರೆ ಅದನ್ನು ಮಾರಲೂಕೂಡದು, ಬಿಡಿಸಿಕೊಳ್ಳಲೂಬಾರದು. ಸಂಪೂರ್ಣ ಸರ್ವೇಶ್ವರನದಾಗಿರಲು ಸಮರ್ಪಿಸುವಂಥದೆಲ್ಲಾ ಸರ್ವೇಶ್ವರನಿಗೆ ಮೀಸಲಾಗಿಯೇ ಇರಬೇಕು.


ಲೇವಿಯರ ಪಾಲಿನ ಸರಹದ್ದಿಗೆ ಪಕ್ಕದಲ್ಲಿರುವ ಆ ಕ್ಷೇತ್ರ ಅತಿಪವಿತ್ರವೂ ನಾಡಿನಲ್ಲಿನ ಮೀಸಲಲ್ಲಿ ಮೀಸಲೂ ಆಗಿ ಯಾಜಕರದಾಗಿರುವುದು.


ಅವರು ತಮ್ಮ ಪೇಟೆಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಕೂಡದು. ಅದು ಅವರಿಗೆ ಶಾಶ್ವತವಾದ ಸೊತ್ತು.


ಯಾಜಕನು ಇವುಗಳನ್ನೂ ಪ್ರಥಮಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿ ಎತ್ತಬೇಕು. ಅವು ಸರ್ವೇಶ್ವರನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.


“ನಿಮ್ಮ ಕಣದಿಂದ ಹಾಗು ಆಲೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸಲು ತಡಮಾಡಬಾರದು.


ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ.


ಆದರೆ ಲೇವಿಯರ ಸೊತ್ತಾಗಿರುವ ಪೇಟೆಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸಿಕೊಳ್ಳುವ ಹಕ್ಕು ಲೇವಿಯರಿಗೆ ಯಾವಾಗಲು ಇರುವುದು.


ಹನ್ನೆರಡುವರೆ ಕಿಲೋಮೀಟರ್ ಉದ್ದದ, ಐದು ಕಿಲೋಮೀಟರ್ ಅಗಲದ, ಒಂದು ಪಾಲು ಯಾಜಕರ ಪಾಲಿನ ಸರಹದ್ದಿಗೆ ಪಕ್ಕದಲ್ಲಿ, ಲೇವಿಯರಿಗೆ ಸಲ್ಲತಕ್ಕ; ಈ ಎರಡು ಪಾಲುಗಳ ಒಟ್ಟಳತೆ ಎಷ್ಟೆಂದರೆ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್.


“ನಿಮ್ಮ ಬೆಳೆಯ ಪ್ರಥಮ ಫಲದಲ್ಲಿ ಅತಿಶ್ರೇಷ್ಠವಾದುದ್ದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. "ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು