Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:15 - ಕನ್ನಡ ಸತ್ಯವೇದವು C.L. Bible (BSI)

15 ಹನ್ನೆರಡುವರೆ ಕಿಲೋಮೀಟರ್ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ, (ಮೀಸಲುಪಾಲಿನ ಒಟ್ಟಳತೆಯಲ್ಲಿ), ಮಿಕ್ಕ ಎರಡುವರೆ ಕಿಲೋಮೀಟರ್ ಅಗಲದ ಭೂಮಿ ಮೀಸಲಿಲ್ಲವೆಂದೆಣಿಸಿ, ರಾಜಧಾನಿಗೆ ಅಂದರೆ, ಜನರ ನಿವಾಸಕ್ಕೂ ಸುತ್ತಣ ಪ್ರದೇಶಕ್ಕೂ ಪ್ರತ್ಯೇಕವಾಗಿರಲಿ. ರಾಜಧಾನಿ ಅದರ ಮಧ್ಯದಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಪ್ಪತ್ತೈದು ಸಾವಿರ ಮೊಳ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ ಮೀಸಲು ಪಾಲಿನ ಒಟ್ಟು ಅಳತೆಯಲ್ಲಿ ಉಳಿದ ಐದು ಸಾವಿರ ಮೊಳ ಅಗಲದ ಭೂಮಿಯು ಮೀಸಲಿಲ್ಲವೆಂದೆಣಿಸಿ ಪಟ್ಟಣಕ್ಕೆ ಅಂದರೆ ಜನರ ನಿವಾಸಕ್ಕೂ ಮತ್ತು ಸುತ್ತಣ ಪ್ರದೇಶಕ್ಕೂ ಪ್ರತ್ಯೇಕಿಸಲ್ಪಡಲಿ. ಪಟ್ಟಣವು ಅದರ ಮಧ್ಯದಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಪ್ಪತ್ತೈದು ಸಾವಿರ ಮೊಳ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ [ಮೀಸಲುಪಾಲಿನ ಒಟ್ಟಳತೆಯಲ್ಲಿ] ವಿುಕ್ಕ ಐದು ಸಾವಿರ ಮೊಳ ಅಗಲದ ಭೂವಿುಯು ಮೀಸಲಲ್ಲವೆಂದೆಣಿಸಿ ರಾಜಧಾನಿಗೆ ಅಂದರೆ ಜನರ ನಿವಾಸಕ್ಕೂ ಸುತ್ತಣ ಪ್ರದೇಶಕ್ಕೂ ಪ್ರತ್ಯೇಕಿಸಲ್ಪಡಲಿ, ರಾಜಧಾನಿಯು ಅದರ ಮಧ್ಯದಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಯಾಜಕರಿಗೆ ಮತ್ತು ಲೇವಿಯರಿಗೆ ಸ್ಥಳ ಕೊಟ್ಟ ಮೇಲೆ ಇನ್ನೂ ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಐದು ಸಾವಿರ ಮೊಳ ಅಗಲದ ಒಂದು ತುಂಡು ಜಾಗ ಉಳಿಯುವದು. ಈ ಜಾಗವು ನಗರವನ್ನು ಕಟ್ಟುವುದಕ್ಕಾಗಿ; ಪಶುಗಳ ಹುಲ್ಲುಗಾವಲಿಗಾಗಿ ಮತ್ತು ಮನೆಗಳನ್ನು ಕಟ್ಟುವುದಕ್ಕಾಗಿ ಇರುವದು. ಸಾಮಾನ್ಯ ಜನರು ಈ ಜಾಗವನ್ನು ಉಪಯೋಗಿಸಬಹುದು. ನಗರವು ಇದರ ಮಧ್ಯದಲ್ಲಿ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಸುಮಾರು ಎರಡೂವರೆ ಕಿಲೋಮೀಟರ್ ಅಗಲ ಮತ್ತು ಸುಮಾರು ಹದಿಮೂರು ಕಿಲೋಮೀಟರ್ ಉದ್ದದ ಉಳಿದ ಪ್ರದೇಶವು ನಗರದ ಸಾಮಾನ್ಯ ಬಳಕೆಗಾಗಿ, ಇದು ಮನೆಗಳು ಮತ್ತು ಹುಲ್ಲುಗಾವಲುಗಳನ್ನು ಹೊಂದಿರುತ್ತದೆ. ನಗರವು ಅದರ ಮಧ್ಯದಲ್ಲಿ ಇರುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:15
5 ತಿಳಿವುಗಳ ಹೋಲಿಕೆ  

ನೀವು ಸಮರ್ಪಿಸುವ ಪರಿಶುದ್ಧಭಾಗದ ಅಕ್ಕಪಕ್ಕದಲ್ಲಿ ಎರಡುವರೆ ಕಿಲೋಮೀಟರ್ ಅಗಲದ, ಹನ್ನೆರಡುವರೆ ಕಿಲೋಮೀಟರ್ ಉದ್ದದ ಕ್ಷೇತ್ರವನ್ನು ರಾಜಧಾನಿಗೆ ಒಳಪಟ್ಟ ಭೂಮಿಯನ್ನಾಗಿ ನೇಮಿಸಬೇಕು; ಅದರಲ್ಲಿ ಇಸ್ರಯೇಲ್ ವಂಶದವರಿಗೆಲ್ಲಾ ಹಕ್ಕಿರುವುದು.


ಆಲಯವನ್ನು ನಾಲ್ಕು ಪಾರ್ಶ್ವಗಳಲ್ಲಿಯೂ ಅಳೆದನು; ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರಳತೇ ಕೋಲುದ್ದದ, ಐನೂರಳತೇ ಕೋಲಗಲದ ಗೋಡೆ ಸುತ್ತಮುತ್ತಲಿತ್ತು.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


“ಮೀಸಲಾಗಿದದ್ದಕ್ಕೂ ಮೀಸಲಲ್ಲದ್ದಕ್ಕೂ ಇರುವ ಭೇದವನ್ನು ನನ್ನ ಜನರಿಗೆ ತೋರಿಸಿ, ಶುದ್ಧಾಶುದ್ಧ ವಿವೇಚನೆಯನ್ನು ಅವರಿಗೆ ಬೋಧಿಸಲಿ.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಉಲ್ಲಂಘಿಸಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಗೊಳಿಸಿದ್ದಾರೆ; ಮೀಸಲಾದುದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ. ಶುದ್ಧಾ ಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯೆ ಅಪಕೀರ್ತಿಗೆ ಗುರಿಯಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು