ಯೆಹೆಜ್ಕೇಲನು 48:35 - ಕನ್ನಡ ಸತ್ಯವೇದವು C.L. Bible (BSI)35 ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳ; ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ಯೆಹೋವನ ನೆಲೆ ಎಂಬ ಹೆಸರಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 “ನಗರದ ಸುತ್ತಳತೆಯು ಹದಿನೆಂಟು ಸಾವಿರ ಮೊಳ. ಇಂದಿನಿಂದ ಈ ನಗರದ ಹೆಸರು ‘ಯೆಹೋವನು ಅಲ್ಲಿದ್ದಾನೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 “ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ’ ” ಎಂಬುದೇ ಆಗಿರುವುದು. ಅಧ್ಯಾಯವನ್ನು ನೋಡಿ |
ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.