Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:11 - ಕನ್ನಡ ಸತ್ಯವೇದವು C.L. Bible (BSI)

11 “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮೇ, ನನ್ನ ಜೀವದಾಣೆ! ನಾನು ನಿನ್ನನ್ನು ಶಿಕ್ಷಿಸುವೆನು. ಯಾಕೆಂದರೆ ನೀನು ನನ್ನ ಪವಿತ್ರ ಸ್ಥಳಕ್ಕೆ ಮಹತ್ವವನ್ನು ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಬರಿಗೊಳಿಸುವ ನಿನ್ನ ಎಲ್ಲಾ ಕಾರ್ಯಗಳಿಂದ ನೀನು ಅದನ್ನು ಅಶುದ್ಧಗೊಳಿಸಿರುವೆ. ನಾನು ನಿನಗೆ ಕನಿಕರತೋರಿಸದೆ ಶಿಕ್ಷಿಸುವೆನು. ನಿನ್ನ ಮೇಲೆ ನನಗೆ ದಯೆಯಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:11
48 ತಿಳಿವುಗಳ ಹೋಲಿಕೆ  

“ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು.


ಅವರು ಅಲ್ಲಿಗೆ ಸೇರಿ ಎಲ್ಲ ಅಸಹ್ಯ ವಸ್ತುಗಳನ್ನೂ ಸಮಸ್ತ ಅನಿಷ್ಟ ವಿಗ್ರಹಗಳನ್ನೂ ತೆಗೆದುಹಾಕುವರು.


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು.


ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.”


ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ;


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”


ಸರ್ವೇಶ್ವರನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆದುತಂದರು; ಇಗೋ, ಆ ಆಲಯದ ಬಾಗಿಲ ಮುಂದೆ, ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಸುಮಾರು ಇಪ್ಪತ್ತೈದು ಜನರು ಸರ್ವೇಶ್ವರನ ಆಲಯಕ್ಕೆ ಬೆನ್ನುಮಾಡಿ ಪೂರ್ವದ ಕಡೆಗೆ ಮುಖಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ವಯಸ್ಕರೂ ವೃದ್ಧರೂ ಬಿದ್ದಿದ್ದಾರೆ ಬೀದಿಗಳಲ್ಲೆ ತರುಣತರುಣಿಯರು ತುತ್ತಾಗಿದ್ದಾರೆ ಖಡ್ಗಗಳಿಗೆ. ನಿನ್ನ ಪ್ರಕೋಪದ ದಿನದಂದು ಹತಮಾಡಿದೆಯಲ್ಲಾ ಅವರನ್ನು ಕನಿಕರಿಸದೆ !


ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.”


ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮ್ಮ ಮಾತನ್ನು ಈಡೇರಿಸುವುದಾಗಿ ಶಪಥಮಾಡಿದರು. ತಮಗಿಂತಲೂ ಮೇಲಾದವರಾರೂ ಇಲ್ಲವಾದ ಕಾರಣ ತಮ್ಮ ಸ್ವಂತ ಹೆಸರಿನಲ್ಲೇ ಶಪಥಮಾಡಿದರು.


ದೇವರು ಹುಟ್ಟುರೆಂಬೆಗಳನ್ನೇ ಉಳಿಸಲಿಲ್ಲ ಎಂದಮೇಲೆ ನಿನ್ನನ್ನು ಉಳಿಸುವರೆಂದು ತಿಳಿಯುವೆಯಾ?


ಅವರ ಅಪರಾಧ ಜಗತ್ತಿಗೆಲ್ಲ ಸೌಭಾಗ್ಯವನ್ನೂ ಅವರ ಅಪಜಯವು ಇತರರಿಗೆಲ್ಲಾ ಆಶೀರ್ವಾದವನ್ನೂ ತರಲು ಕಾರಣವಾದರೆ, ಅವರ ಸಂಪೂರ್ಣ ಪರಿವರ್ತನೆ ಮತ್ತೆಷ್ಟೋ ಕಲ್ಯಾಣವನ್ನು ಉಂಟುಮಾಡಬೇಕಲ್ಲವೆ?


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇವರು ನನ್ನ ಜನರು; ನಾನು ಕಾರ್ಯತತ್ಪರನಾಗುವ ದಿನದಂದು ಅವರು ನನಗೆ ಸ್ವಕೀಯಜನರಾಗಿರುವರು. ತಂದೆಯೊಬ್ಬನು ತನಗೆ ಸೇವೆಮಾಡುವ ಮಗನನ್ನು ಕಾಪಾಡುವಂತೆ ನಾನು ಅವರನ್ನು ಕಾಪಾಡುವೆನು.


ಸರ್ವೇಶ್ವರಸ್ವಾಮಿಯ ನುಡಿಯಿದು: “ಈ ಲೋಕನಿವಾಸಿಗಳಿಗೆ ನಾನು ಕರುಣೆತೋರಿಸೆನು. ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸಿಬಿಡುವೆನು. ಆ ಬಲಿಷ್ಠರು ಲೋಕವನ್ನು ಧ್ವಂಸಮಾಡುವರು. ಅವರ ಕೈಗೆ ಸಿಕ್ಕದವರನ್ನು ನಾನು ರಕ್ಷಿಸೆನು.”


ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.


ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ಆ ರಾಜ್ಯ ಸಮಸ್ತ ರಾಜ್ಯಗಳಲ್ಲಿ ಕನಿಷ್ಟವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಆ ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣಗತಿಗೆ ತರುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ ಯಾರ ಬಗ್ಗೆ ಅಸಹ್ಯಪಡುತ್ತಿಯೋ


ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.


ನನ್ನ ಹೆಸರಿನಿಂದ ಪ್ರಖ್ಯಾತವಾಗಿರುವ ದೇವಾಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ.


ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು !


ತದನಂತರ ಕುಗ್ಗಿತವರ ಅಂಕೆ ಸಂಖ್ಯೆ I ಕಷ್ಟಸಂಕಟ, ತಾಪತ್ರಯಗಳ ಮಧ್ಯೆ II


ಎಂತಲೆ ಸೇರರಿವರು ನನ್ನ ವಿಶ್ರಾಂತಿ ನೆಲೆ I ಎಂದು ಸಿಟ್ಟಿನಿಂದ ಕೆರಳಿ ನಾ ಶಪಥಮಾಡಿದೆ II


ತಾನು ಮಾಡಿಸಿದ್ದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಸರ್ವೇಶ್ವರ ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು, ತಮಗೆ ಮೋಶೆಯ ಮುಖಾಂತರ ಕೊಡಲಾದ, ನನ್ನ ಎಲ್ಲ ಧರ್ಮಶಾಸ್ತ್ರವಿಧಿನ್ಯಾಯಗಳನ್ನು ಅನುಸರಿಸಿ ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿ, ಇಸ್ರಯೇಲರ ಎಲ್ಲ ಊರುಗಳಲ್ಲಿ ಹಾಗು ನನಗೆ ಪ್ರಿಯವಾದ ಜೆರುಸಲೇಮಿನಲ್ಲಿ ಸದಾಕಾಲ ಇರುವುದು;


ಸರ್ವೇಶ್ವರ ಜೆರುಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ


ಇದಲ್ಲದೆ ಜುದೇಯದ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಬಲಿಪೀಠಗಳನ್ನು ಹಾಗು ಮನಸ್ಸೆಯು ಸರ್ವೇಶ್ವರನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಬಲಿಪೀಠಗಳನ್ನು ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.


ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಸರ್ವೇಶ್ವರ ಆ ಆಲಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು ತಮಗೆ ಮೋಶೆಯ ಮುಖಾಂತರ ಕೊಡಲಾದ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವುದಾದರೆ


ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ ಜೆರುಸಲೇಮಿನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


“ಇಸ್ರಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.


ಅವನ ಮೇಲೆ ಅದು ಬೀಸುತ್ತದೆ ನಿರ್ದಾಕ್ಷಿಣ್ಯದಿಂದ ತಪ್ಪಿಸಿಕೊಳ್ಳಲು ಅವನು ಯತ್ನಿಸುತ್ತಾನೆ ಅದರ ಹೊಡೆತದಿಂದ.


ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !


ಇದಲ್ಲದೆ, ನನಗೆ ಈ ಅಪರಾಧವನ್ನು ನಡೆಸಿದ್ದಾರೆ: ಆಹುತಿಕೊಟ್ಟ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಶುದ್ಧ ಮಾಡಿದರು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ಹೀಗಿರಲು ಸರ್ವೇಶ್ವರ ಸ್ವಾಮಿಯಾದ ನಾನು ಹೇಳುವುದಿದು: ‘ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಗೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.


ಇದಾದ ಮೇಲೆ ದೇವರು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಮತ್ತೂ ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿ


ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರಮಾಡಿದರು; ಹೌದು, ನನ್ನ ಮಂದಿರದ ನಟ್ಟನಡುವೆ ಇದನ್ನು ನಡೆಸಿದರು.


ನನ್ನ ಹೊಸ್ತಲನಿಲವುಗಳ ಪಕ್ಕದಲ್ಲಿ ತಮ್ಮ ಹೊಸ್ತಲುನಿಲವುಗಳನ್ನು ಹಾಕಿಕೊಂಡು, ನನ್ನ ಮನೆಗೂ ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ನನ್ನ ಪವಿತ್ರನಾಮವನ್ನು ಅಶುದ್ಧಗೊಳಿಸರು. ಹೌದು, ಹಿಂದೆ ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರನಾಮವನ್ನು ಹೊಲೆಗೆಡಿಸಿದರು; ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು