Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:2 - ಕನ್ನಡ ಸತ್ಯವೇದವು C.L. Bible (BSI)

2 ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; (ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮುತ್ತಿಗೆಯ ದಿನಗಳು ತೀರಿದಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರು (ಹಾಗೆಯೇ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದರ ಮೂರನೆಯ ಒಂದು ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು. ಮೂರನೆಯ ಒಂದು ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು. ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಖಡ್ಗವನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:2
19 ತಿಳಿವುಗಳ ಹೋಲಿಕೆ  

ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಅವನ ಸುತ್ತಲಿನ ಸಕಲ ಸಹಾಯಕರನ್ನೂ ಅವನ ಸಮಸ್ತವ್ಯೂಹಗಳವರನ್ನೂ ನಾನು ಎಲ್ಲ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


‘ನಾವೆಲ್ಲಿಗೆ ಹೋಗಬೇಕು?’ ಎಂದು ಕೇಳಿಯಾರು. ಆಗ ನೀನು ಅವರಿಗೆ : ‘ಇದು ಸರ್ವೇಶ್ವರನ ಸಂದೇಶ: ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಸಾಯುವರು’ ಎಂದು ಹೇಳು.


ಇವರಿಗಾಗಲಿ ಇವರ ಪೂರ್ವಜರಿಗಾಗಲಿ ಪರಿಚಯವಿಲ್ಲದ ಜನಾಂಗಗಳ ನಡುವೆ ಇವರನ್ನು ಚದರಿಸಿಬಿಡುವೆನು. ಇವರು ಅಳಿದು ಹಾಳಾಗುವ ತನಕ ಇವರ ಹಿಂದೆ ಖಡ್ಗವನ್ನು ಕಳಿಸುವೆನು.”


ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ” ಎಂದು ಸಾರುತ್ತಿದ್ದನು.


ಅವರಿಗೂ ಅವರ ಪೂರ್ವಜರಿಗೂ ನಾನು ಅನುಗ್ರಹಿಸಿದ ನಾಡಿನಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.”


ಆದಕಾರಣ ಬಿರುಗಾಳಿ ಬಡಿದುಕೊಂಡುಹೋಗುವ ಒಣಹುಲ್ಲೋ ಎಂಬಂತೆ ಸರ್ವೇಶ್ವರನಾದ ನಾನು ನಿನ್ನನ್ನು ಚದರಿಸಿಬಿಡುವೆನು.


ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಸಕಲ ಸೈನ್ಯಸಮೇತ ಬಂದು ಜೆರುಸಲೇಮನ್ನು ಮುತ್ತಿದನು.


ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿನದಲ್ಲಿ ನಗರದ ಪೌಳಿಗೋಡೆ ಒಡಕುಬಿದ್ದು ಜೆರುಸಲೇಮ್ ಶತ್ರುವಶವಾಯಿತು.


ಈ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು;


ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.’


ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲ ಕಡೆಯ ಗಾಳಿಗೆ ತೂರಿಬಿಡುವೆನು; ಈ ಮಾತನ್ನು ಆಡಿದವನು ಸರ್ವೇಶ್ವರನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”


ಹತರಾಗುವರು ನಾಡಿನ ಮೂರರಲ್ಲೆರಡು ಭಾಗದವರು, ಮೂರನೆಯ ಭಾಗದವರು ಉಳಿಯುವರಲ್ಲಿ, ಸರ್ವೇಶ್ವರಸ್ವಾಮಿಯ ನುಡಿಯಿದು.


ಆದುದರಿಂದ ಈ ಜನರು ಕಹಿಯಾದ ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು; ವಿಷ ಬೆರೆತ ನೀರನ್ನು ಕುಡಿಯುವಂತೆ ಮಾಡುವೆನು.


ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು