Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:6 - ಕನ್ನಡ ಸತ್ಯವೇದವು C.L. Bible (BSI)

6 ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಇತರ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮವನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡಿಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜೆರುಸಲೇಮಿನ ನಿವಾಸಿಗಳು ನನ್ನ ಆಜ್ಞೆಗಳಿಗೆ ದಂಗೆ ಎದ್ದಿದ್ದಾರೆ. ಅವರು ಇತರ ಜನಾಂಗಗಳಿಗಿಂತ ಕೆಟ್ಟವರು. ಅವರು ತಮ್ಮ ಸುತ್ತಲಿರುವ ಬೇರೆ ದೇಶಗಳಿಗಿಂತ ಹೆಚ್ಚಾಗಿ ನನ್ನ ಕಟ್ಟಳೆಗಳನ್ನು ಉಲ್ಲಂಬಿಸಿದ್ದಾರೆ. ಅವರು ನನ್ನ ಆಜ್ಞೆಗಳನ್ನು ತಿರಸ್ಕರಿಸಿದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಕೆಯು ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ, ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತನಕ್ಕೆ ತಿರುಗಿಸಿಬಿಟ್ಟಳು. ಅವರು ನನ್ನ ನ್ಯಾಯಗಳನ್ನೂ ಅನುಸರಿಸದೆ ನನ್ನ ನಿಯಮಗಳನ್ನೂ ನಿರಾಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:6
24 ತಿಳಿವುಗಳ ಹೋಲಿಕೆ  

ನನ್ನ ಮಾತನ್ನು ಕೇಳದೆಹೋದ ತಮ್ಮ ಮೂಲಪಿತೃಗಳ ದುಷ್ಕೃತ್ಯಗಳ ಕಡೆ ಈ ಜನರು ತಿರುಗಿಕೊಂಡಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸುತ್ತಿದ್ದಾರೆ. ಅವುಗಳನ್ನು ಪೂಜಿಸುತ್ತಿದ್ದಾರೆ. ನಾನು ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ಮೀರಿದ್ದಾರೆ.


“ನಿಮ್ಮ ಪೂರ್ವಜರು ಕಿವಿಗೊಡದೆಹೋದರು: ಹಟಮಾರಿಗಳಾದರು; ಮಂದಮತಿಗಳಾದರು; ಅವರ ಹೃದಯ ಗೋರ್ಕಲ್ಲಿನಂತೆ ಆಯಿತು.


ಈ ಜೆರುಸಲೇಮಿನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ. ಹಿಂತಿರುಗಿ ಬರಲೊಲ್ಲರು.


ಪಾಲಿಸಲಿಲ್ಲ ಅವರು ದೇವರ ನಿಬಂಧನೆಯನು I ಅನುಸರಿಸಲಿಲ್ಲ ಆತನ ಧರ್ಮಶಾಸ್ತ್ರವನು II


ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಅನ್ಯಜನರಲ್ಲಿ ಕೂಡ ಇಲ್ಲದಂಥ ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ.


“ಸಮಾರಿಯ ಎಂಬಾಕೆ ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.


‘ನೀನು (ಯೆರೆಮೀಯ) ವಾಸವಾಗಿರುವುದು ಮೋಸಗಾರರ ಮಧ್ಯೆ ಮೋಸಗಾರರಾಗಿರುವುದರಿಂದಲೆ ಅವರು ನನ್ನನ್ನು ಅರಿಯಲೊಲ್ಲರು’ ಎನ್ನುತ್ತಾರೆ ಸರ್ವೇಶ್ವರ.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ಈಪರಿ ತೊರೆದುಬಿಟ್ಟರು ತಮ್ಮ ಮಹಿಮಾ ದೇವರನು I ಆರಿಸಕೊಂಡರು ಹುಲ್ಲು ತಿನ್ನುವ ಬಸವನ ವಿಗ್ರಹವನು II


ಆಗ ಸರ್ವೇಶ್ವರ, “ಎಲ್ಲಿಯವರೆಗೆ ನೀವು ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?


ಆದರೆ ಇಸ್ರಯೇಲರು ಅವರ ಮಾತನ್ನು ಕೇಳದೆ, ಮನಸ್ಸೆಯಿಂದ ಪ್ರೇರಿತರಾಗಿ, ತಮ್ಮ ಮುಂದೆಯೇ ಸರ್ವೇಶ್ವರನಿಂದ ಸಂಹೃತರಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


“ಯೆಹೂದ್ಯರ ಅರಸನಾದ ಮನಸ್ಸೆಯು, ಹಿಂದೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡೆಸಿದ್ದಾನೆ. ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದ್ದಾನೆ;


ನಮ್ಮ ಅರಸರು, ರಾಜ್ಯಪಾಲರು, ಯಾಜಕರು, ಹಿರಿಯರು ಅನುಸರಿಸಲಿಲ್ಲ, ನಿಮ್ಮಾಜ್ಞೆಯನು, ಧರ್ಮೋಪದೇಶವನು. ಲಕ್ಷಿಸಲಿಲ್ಲ ನೀವಿತ್ತ ಎಚ್ಚರಿಕೆಯ ಮಾತುಗಳನು.


ಅವರಿದ್ದರು ನೀವೇ ಅನುಗ್ರಹಿಸಿದ ಸ್ವರಾಜ್ಯದಲಿ ನಲಿದಾಡಿದರು ನೀವು ಕರುಣಿಸದ ಸಮೃದ್ಧಿಯಲಿ ವಾಸಿಸಿದರು ಸಾರವತ್ತಾದ ಸವಿಸ್ತಾರ ನಾಡಿನಲಿ. ಆದರೂ ಮಾಡಲಿಲ್ಲ ನಿಮ್ಮ ಸೇವೆ, ಬಿಡಲಿಲ್ಲ ತಮ್ಮ ದುರ್ನಡತೆ ನಮಗೊದಗಿರುವ ಗುಲಾಮಗಿರಿ, ಇದರ ಪರಿಣಾಮವಲ್ಲವೆ?


ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಗೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”


“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.


ಸ್ವಾಮೀ, ನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.


“ಸರ್ವೇಶ್ವರಾ, ನಮ್ಮ ದೇವರೇ, ನೀವು ನಿಮ್ಮ ಭುಜಪರಾಕ್ರಮವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟಿನಿಂದ ಪಾರುಮಾಡಿ, ಇಂದಿನವರೆಗೂ ಸುಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡವರಾಗಿದ್ದೀರಿ. ಈಗ ಚಿತ್ತೈಸಿ. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು