ಯೆಹೆಜ್ಕೇಲನು 5:8 - ಕನ್ನಡ ಸತ್ಯವೇದವು C.L. Bible (BSI)8 ಆದುದರಿಂದ ಜೆರುಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದುದರಿಂದ ಯೆರೂಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇಗೋ, ನಾನೇ ನಿನಗೆ ವಿರುದ್ಧನಾಗಿದ್ದೇನೆ, ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮಗೆ ವಿರೋಧವಾಗಿದ್ದೇನೆ. ಬೇರೆ ಜನರ ಕಣ್ಣೆದುರಿನಲ್ಲಿಯೇ ನಿಮ್ಮನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ, ನಿನಗೆ ವಿರೋಧವಾಗಿದ್ದೇನೆ. ಜನಾಂಗಗಳ ಕಣ್ಣುಗಳ ಮುಂದೆ ನಿಮ್ಮ ಜನರನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿ |
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.