Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:14 - ಕನ್ನಡ ಸತ್ಯವೇದವು C.L. Bible (BSI)

14 ನಾನು ಅವರ ವಿರುದ್ಧ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಬದವರೆಗೂ ಹಾಳುಪಾಳು ಮಾಡುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಅವರ ಮೇಲೆ ಕೈಯತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಅವರ ಮೇಲೆ ನನ್ನ ಕೈಯೆತ್ತಿ ಅವರನ್ನು ದಂಡಿಸುವೆನು ಮತ್ತು ಮರುಭೂಮಿಯಿಂದ ದಿಬ್ಲದವರೆಗೆ ಅವರು ಯಾವುದೇ ದೇಶದಲ್ಲಿ ವಾಸವಾಗಿದ್ದರೂ ನಾಶಮಾಡುವೆನು. ಆಗ ನಾನೇ ಯೆಹೋವನೆಂಬುದು ಅವರಿಗೆ ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಅವರ ವಿರುದ್ಧ ಕೈಯೆತ್ತಿ, ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು, ನಾನೇ ಯೆಹೋವ ದೇವರು, ಎಂದು ಅವರಿಗೆ ತಿಳಿಯುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:14
23 ತಿಳಿವುಗಳ ಹೋಲಿಕೆ  

ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


“ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆ; ನಿನ್ನನ್ನು ದ್ವೇಷಿಸಿ, ನಿನ್ನ ಕೆಟ್ಟನಡತೆಗೆ ಅಸಹ್ಯಪಡುವ ಪಿಲಿಷ್ಟಿಯ ಕುವರಿಯರ ಕೈಗೆ ನಿನ್ನನ್ನು ಒಪ್ಪಿಸಿದೆ.


“ನರಪುತ್ರನೇ, ಒಂದು ನಾಡು ಅಪರಾಧವನ್ನು ನಡೆಸಿ ನನಗೆ ವಿರುದ್ಧ ಪಾಪಮಾಡಿದ ಮೇಲೆ ನಾನು ಕೈಯೆತ್ತಿ, ಅದರ ಜೀವನಾಧಾರವನ್ನು ನಿಲ್ಲಿಸಿಬಿಟ್ಟು, ಕ್ಷಾಮವನ್ನು ಬರಮಾಡಿ, ಜನ ಹಾಗೂ ಜಾನುವಾರುಗಳನ್ನು ಅದರಿಂದ ನಿರ್ಮೂಲಮಾಡುತ್ತೇನೆ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಖೈದಿಗಳೊಂದಿಗೆ ಕಾರಾಗೃಹವನ್ನು ಸೇರುವಿರಿ; ಇಲ್ಲವೆ, ಇತರರ ಸಮೇತ ಹತರಾಗುವಿರಿ. ಇದೇ ನಿಮ್ಮ ಗತಿ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಮನಸ್ಸೆ ಎಫ್ರಯಿಮನ್ನು ಎಫ್ರಯಿಮ್ ಮನಸ್ಸೆಯನ್ನು ಕಬಳಿಸುತ್ತದೆ. ಇವೆರಡೂ ಸೇರಿ ಜುದೇಯಕ್ಕೆ ವಿರುದ್ಧವಾಗಿ ಎದ್ದು ನಿಂತಿವೆ. ಇಷ್ಟಾದರೂ ಸಹ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ದೀಬೋನ್ ಗಾದಿನಿಂದ ಅಲ್ಮೋನ್ ದಿಬ್ಲಾತಯಿಮಿನಲ್ಲೂ


ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II


ಇದಲ್ಲದೆ ಸರ್ವೇಶ್ವರ ಅನುಗ್ರಹಿಸಿದ ಈ ವಾಣಿ ನನಗೆ ಕೇಳಿಸಿತು:


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


“ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು, ಅನ್ಯದೇಶಗಳಲ್ಲಿ ಚಲ್ಲಾಪಿಲ್ಲಿ ಮಾಡುವಾಗ ನಾನೇ ಸರ್ವೇಶ್ವರ ಎಂದು ಅವನಿಗೆ ಗೊತ್ತಾಗುವುದು.


ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ಸುಲಿಗೆಗಾಗಿ ನಿನ್ನನ್ನು ಮ್ಲೇಚ್ಛರಿಗೆ ವಶಪಡಿಸುವೆನು. ಜನಾಂಗಗಳಿಂದ ಕಿತ್ತು, ದೇಶಗಳಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


ನಾನು ದೇಶವನ್ನು ಹಾಳುಪಾಳು ಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವುದು; ಇಸ್ರಯೇಲಿನ ಮಲೆನಾಡು ಬೀಡುಬೀಳುವುದು; ಯಾರೂ ಇಲ್ಲಿ ಹಾದುಹೋಗರು.


“ಜುದೇಯ ನಾಡನ್ನೂ ಜೆರುಸಲೇಮಿನ ನಿವಾಸಿಗಳೆಲ್ಲರನ್ನೂ ಕೈಯೆತ್ತಿ ಸದೆಬಡಿಯುವೆನು; ಬಾಳನ ಪೂಜೆಪುರಸ್ಕಾರಗಳ ಗುರುತೂ ಅಲ್ಲಿ ಇಲ್ಲದಂತೆ ಮಾಡುವೆನು. ಅವನ ಪೂಜಾರಿಗಳನ್ನು ನಿರ್ನಾಮಗೊಳಿಸುವೆನು;


ಇಗೋ, ಸರ್ವೇಶ್ವರ ಬರಿದುಮಾಡುವರು ಧರೆಯನು, ನಿರ್ಜನ ಪ್ರದೇಶವಾಗಿಸುವರು ವಿರೂಪಗೊಳಿಸಿ ಅದನು, ಚದರಿಸುವರು ಅದರ ನಿವಾಸಿಗಳನು.


ಬಾಡಿಹೋಗಿದೆ ದ್ರಾಕ್ಷಾಲತೆ, ದುಬಾರಿಯಾಗಿದೆ ದ್ರಾಕ್ಷಾರಸ, ನರಳುತಿದೆ ನಲಿಯುತ್ತಿದ್ದ ಜನಸಮೂಹ.


ಈ ನಾಡೆಲ್ಲ ಹಾಳಾಗಿ ಇದನ್ನು ನೋಡುವವರು ನಿಬ್ಬೆರಗಾಗುವರು. ಇದರ ಜನರು ಎಪ್ಪತ್ತು ವರ್ಷ ಕಾಲ ಬಾಬಿಲೋನಿನ ಅರಸನಿಗೆ ಗುಲಾಮರಾಗಿ ಇರುವರು.


ಅವರು ದ್ರೋಹ ಮಾಡಿದ್ದರಿಂದ ನಾಡು ಕಾಡಾಗುವುದು ನನ್ನಿಂದ.” ಇದು ಸರ್ವೇಶ್ವರನಾದ ದೇವರ ನುಡಿ.


ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವುವು; ಆಗ ನಾನೇ ಸರ್ವೇಶ್ವರ ಎಂದು ನಿನ್ನವರಿಗೆ ನಿಶ್ಚಿತವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು